‘ನನ್ನ ಜೀವಕ್ಕೆ ಅಪಾಯವಾದರೆ ಸರ್ಕಾರವೇ ಹೊಣೆ’ ಎಂದು ಹೇಳಿ ಠಾಣೆಗೆ ತೆರಳಿದ ಮಹೇಶ್ ಶೆಟ್ಟಿ ತಿಮರೋಡಿ

Date:

Advertisements

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರ ತೇಜೋವಧೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ದ್ವೇಷದ ಪೋಸ್ಟ್ ಶೇರ್ ಮಾಡಿರುವ ಆರೋಪದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ.

ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೊ ಮಾಡಿ ಮಹೇಶ್ ಶೆಟ್ಟಿ ಅವರು ಸಂತೋಷ್ ಅವರನ್ನು ಅವಹೇಳನ ಮಾಡಿ, ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇಷ ಭಾವನೆಯನ್ನು ಉಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಉಡುಪಿ ಗ್ರಾಮಾಂತರ ಬಿಜೆಪಿಯ ಮಂಡಲಾಧ್ಯಕ್ಷ ರಾಜೀವ ಕುಲಾಲ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಅದರಂತೆ 196(1), 352, 353(2) ಬಿಎನ್‌ಎಸ್ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಚಾರಣೆಗೆ ಹಾಜರಾಗುವಂತೆ ಬ್ರಹ್ಮಾವರ ಪೊಲೀಸ್​ ಠಾಣಾ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಸೂಚಿಸಿದ್ದರು. ಅವರು ವಿಚಾರಣೆಗೆ ಹಾಜರಾಗಿರಲಿಲ್ಲ. ಗುರುವಾರ ಬೆಳಿಗ್ಗೆ ನೂರಾರು ಪೊಲೀಸರು ತಿಮರೋಡಿ ಅವರನ್ನು ಬಂಧಿಸಲು ಆಗಮಿಸಿದರು.

Advertisements

ವಕೀಲರಿಂದ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಲು ಬಂದ ಪೊಲೀಸರುನ್ನು ಗಿರೀಶ್ ಮಟ್ಟಣ್ಣನವರ್ ಮತ್ತು ತಿಮರೋಡಿ ಪರ ವಕೀಲರು ತಡೆದರು. ನಮ್ಮ ಖಾಸಗಿ ವಾಹನದಲ್ಲಿ ವಿಚಾರಣೆಗೆ ಕರೆ ತರುತ್ತೇವೆ ಎಂದು ಪೊಲೀಸರಿಗೆ ಮನವರಿಕೆ ಮಾಡಿದರು. ಒಂದಿಷ್ಟು ಹೊತ್ತು ವಕೀಲರು ಮತ್ತು ಪೊಲೀಸರ ನಡುವೆ ವಾಗ್ದಾದವೂ ನಡೆಯಿತು.

ಸದ್ಯದ ಮಾಹಿತಿ ಪ್ರಕಾರ ಗಿರೀಶ್ ಮಟ್ಟಣ್ಣನವರ್ ಅವರು ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಖಾಸಗಿ ವಾಹನದಲ್ಲಿ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ತಿಮರೋಡಿ, “ನನ್ನ ಜೀವಕ್ಕೆ ಅಪಾಯವಾದರೆ ಅದಕ್ಕೆ ಸರ್ಕಾರವೇ ಹೊಣೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಬಸವ ಸಂಸ್ಕೃತಿ ಅಭಿಯಾನ, ಸೆ.1ರಿಂದ ಆರಂಭ

ಲಿಂಗಾಯತ ಮಠಾಧೀಶರ ಒಕ್ಕೂಟವು ಸೆ.1ರಿಂದ ಅ.1ರವರೆಗೆ ರಾಜ್ಯದಲ್ಲಿ ನಡೆಸಲಿರುವ ಬಸವ ಸಂಸ್ಕೃತಿ...

ಧರ್ಮಸ್ಥಳ | ಅನನ್ಯಾ ಭಟ್ ಪ್ರಕರಣ ಎಸ್‌ಐಟಿಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮದಲ್ಲಿ ಅಕ್ರಮವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಆರೋಪ ಪ್ರಕರಣ...

ಚಿಕ್ಕಮಗಳೂರು l ಎಸ್ಐಟಿ ತನಿಖೆ: ಬಿಜೆಪಿ, ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕು; ದಸಂಸ ಆಗ್ರಹ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ...

Download Eedina App Android / iOS

X