ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

Date:

Advertisements

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ. ಹಿಂದುಳಿದ ಸಮುದಾಯಗಳ ಏಳಿಗೆ ಉದ್ದೇಶಕ್ಕೆ ಜಾರಿ ಮಾಡಿದ ಹಲವು ಯೋಜನೆಗಳಿಂದಾಗಿ ಶೋಷಿತ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನದೇ ಆದ ರೀತಿಯಲ್ಲಿ ಪ್ರಗತಿಪಥದತ್ತ ಸಾಗಲು ನೆರವಾಗಿದೆ ಎಂದು ತಹಶೀಲ್ದಾರ್ ಮನೀಷಾ ಮಹೇಶ್ ಪತ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.

ಬಾಗೇಪಲ್ಲಿ ಪಟ್ಟಣದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ತಾಲೂಕು ಪಂಚಾಯಿತಿ, ಪುರಸಭೆಯಿಂದ ದೇವರಾಜ ಅರಸು ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚಣೆ ಸಮಾರಂಭದಲ್ಲಿ ಮಾತನಾಡಿದರು.

“ಬಡವರ ಬದುಕಿನಲ್ಲಿ ಹೊಸ ಭರವಸೆ ತಂದುಕೊಟ್ಟ ಡಿ. ದೇವರಾಜ ಅರಸು ಕರ್ನಾಟಕದಲ್ಲಿ ಆರ್ಥಿಕ, ಸಾಮಾಜಿಕ ಆಂದೋಲನದ ಮೂಲಕ ಹಲವಾರು ಜನಹಿತ ಯೋಜನೆಗಳನ್ನು ಅನುಷ್ಠಾನಗೊಳಿಸುವುದರಲ್ಲಿ ಯಶಸ್ಸು ಸಾಧಿಸಿದವರು. ದೇವರಾಜ ಅರಸರು ತಮ್ಮ ನಾಲ್ಕು ದಶಕಗಳ ಸಾರ್ವಜನಿಕ ಜೀವನದಲ್ಲಿ ಎಂಟು ವರ್ಷಗಳ ಕಾಲ ಕರ್ನಾಟಕದ ಮುಂಖ್ಯಮಂತ್ರಿಯಾಗಿ ಅಧಿಕಾರ ನಡೆಸಿ ನವಸಮಾಜದ ನಿರ್ಮಾಣಕ್ಕಾಗಿ ಭದ್ರ ಬುನಾದಿ ಹಾಕಿಕೊಟ್ಟು ಆಡಿದ್ದನ್ನು ಮಾಡಿ ತೋರಿಸಿದವರು” ಎಂದು ಹೇಳಿದರು.

Advertisements

ಪ್ರಧಾನ ಭಾಷಣಕಾರ ಕೆ ಎಂ ನಯಾಜ್ ಅಹಮ್ಮದ್ ಮಾತನಾಡಿ, “ಈ ದೇಶದ ಹಿಂದುಳಿದ ವರ್ಗಗಳ, ದಲಿತರ, ಬಡವರ ಮನಸ್ಸಿನಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿರುತ್ತಾರೆ. ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ ಅವರನ್ನು ʼಮೌನಕ್ರಾಂತಿಯ ಹರಿಕಾರʼರೆಂದೇ ಹೇಳಬಹುದು. ಅರಸು ಮಹಾ ಮಾನವತಾ ವಾದಿ, ಸಂಕಷ್ಟದಲ್ಲಿರುವವರನ್ನು ಕಂಡರೆ ಮರುಗುವ ಹೆಂಗರುಳು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಬಗ್ಗೆ ನಿಸ್ಸಹಾಯಕರ ಬಗ್ಗೆ ಅನುಕಂಪ, ಬದುಕಿನ ಸಂಧ್ಯಾಕಾಲದಲ್ಲಿ ಅನಾದರಣೆಗೆ ತುತ್ತಾಗುವ ವೃದ್ದರಿಗೆ ನೆಮ್ಮದಿ ನೀಡಲು ₹40 ಮಾಸಾಶನ ನೀಡಿ ‘ವೃದ್ಧಾಪ್ಯ ವೇತನ’ ಜಾರಿಗೆ ತಂದru” ಎಂದು ಹೇಳಿದರು.

“ಅಂಗವಿಕಲರು ಮತ್ತು ಅನಾಥರಿಗೆ ಆರ್ಥಿಕ ನೆರವು ನೀಡಿದರು. ಅಕ್ಷರ ಕಲಿತು ಪದವಿ ಪಡೆದ ಲಕ್ಷಾಂತರ ನಿರುದ್ಯೋಗಿ ಪದವೀಧರರ ಬಾಳಿನ ನಿರಾಸೆಯನ್ನು ದೂಡಲು ʼಸ್ಟೈಫೆಂಡರಿʼ ಯೋಜನೆ ಜಾರಿಗೆ ತಂದರು. ಗ್ರಾಮಾಂತರ ಮಕ್ಕಳ ಆರೋಗ್ಯ ರಕ್ಷಣೆಗೆ ʼಪೌಷ್ಟಿಕ ಆಹಾರʼ ಯೋಜನೆ, ದುರ್ಬಲ ಮತ್ತು ಹಿಂದುಳಿದ ವರ್ಗಗಳಿಗೆ ʼಉಚಿತ ನಿವೇಶನ ಮತ್ತು ಕಡಿಮೆ ವೆಚ್ಚದ ಮನೆ ನಿರ್ಮಾಣʼ ಯೋಜನೆ, ʼಭಾಗ್ಯಜ್ಯೋತಿʼ ಯೋಜನೆ ಮೂಲಕ ದುರ್ಬಲರ ಮನೆಗಳಿಗೆ ದೀಪ ಬೆಳಗಿಸಿದರು. ಬಡವರ ನೆರವಿಗಾಗಿ ಸಹಕಾರ ಸಂಘಗಳನ್ನು ಸ್ಥಾಪಿಸಿದರು” ಎಂದು ಹೇಳಿದರು.

ಭೂ ಸುಧಾರಣೆ ಕಾಯಿದೆಯಂತಹ ಜನಪರ ಯೋಜನೆಗಳನ್ನು ರೂಪಿಸಿ ಕಾರ್ಯಾನುಷ್ಠಾನಕ್ಕೆ ತಂದ ಡಿ.ದೇವರಾಜ ಅರಸು ಅವರ ವ್ಯಕ್ತಿತ್ವದ ಬಗ್ಗೆ ಇಂದಿನ ಯುವ ಸಮುದಾಯಕ್ಕೆ ಸಂದೇಶ ಹೋಗುವ ನಿಟ್ಟಿನಲ್ಲಿ ತಾಲೂಕಿನ ವಿವಿಧ ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಆಯೋಜನೆ ಮಾಡಿ ಬಹುಮಾನ ವಿತರಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಬಿಸಿಎಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳನ್ನು ಗುರುತಿಸಿ ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಇಒ ರಮೇಶ, ವಿಸ್ತಾರಣಾಧಿಕಾರಿಗಳಾದ ಆರ್.ಶಿವಪ್ಪ, ಬಿಇಒ ವೆಂಕಟೇಶಪ್ಪ, ಆರ್ ಹನುಮಂತ ರೆಡ್ಡಿ, ಸೋಮಶೇಖರ ರೆಡ್ಡಿ, ಶಿವಪ್ಪ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X