ಬೆಳಗಾವಿ : ಮಾನವೀಯತೆ ಮರೆತು ರೋಗಿಯನ್ನು ಚಳಿಯಲ್ಲಿ ಬಿಟ್ಟು ಹೋದ ಸಿಬ್ಬಂದಿ

Date:

Advertisements

ಮಾನವೀಯತೆ, ಕರುಣೆ ಎನ್ನುವುದು ಆಸ್ಪತ್ರೆಯ ಆವರಣದಲ್ಲಿ ಮರೆತುಹೋದಂತಾಗಿದೆ. ಬೆಳಗಾವಿ ಬಿಮ್ಸ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಬಂದಿದ್ದ ಮಹಿಳಾ ರೋಗಿಯನ್ನು ಸಿಬ್ಬಂದಿ ಚಳಿಯಲ್ಲಿ, ಬಿಟ್ಟುಹೋದ ಹೃದಯವಿದ್ರಾವಕ ಘಟನೆ ನಡೆದಿದೆ.

15 ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಆ ಮಹಿಳೆ ಮತ್ತೆ ಶಸ್ತ್ರಚಿಕಿತ್ಸೆಗೆ ಬಂದಿದ್ದರು. ವಾರ್ಡ್‌ನಿಂದ ಹಳೆಯ ಕಟ್ಟಡದಲ್ಲಿರುವ ಕಾಲು ಮುರಿತ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ಕರೆದೊಯ್ಯುವ ವೇಳೆ ಆಂಬ್ಯುಲೆನ್ಸ್ ಸಿದ್ಧಪಡಿಸದೆ ಸಿಬ್ಬಂದಿ ಮಹಿಳಾ ರೋಗಿಯನ್ನು ಹೊರಗೆ ಬಿಟ್ಟು ಹೋಗಿದ್ದಾರೆ.

ಅರ್ಧ ಗಂಟೆಗೂ ಹೆಚ್ಚು ಕಾಲ ತೊಂದರೆ ಅನುಭವಿಸಿ, ಚಳಿಯಲ್ಲಿ ಪರದಾಡುತ್ತಿದ್ದ ಆ ರೋಗಿಯನ್ನು ನಂತರದಲ್ಲಿ ಮಳೆಯಲ್ಲಿಯೇ ಆಂಬ್ಯುಲೆನ್ಸ್‌ನಲ್ಲಿ ಹಾಕಿ ಶಿಫ್ಟ್ ಮಾಡಲಾಯಿತು. ಈ ದೃಶ್ಯವನ್ನು ಕಂಡ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, “ಆಸ್ಪತ್ರೆಯಲ್ಲಿ ಕರುಣೆ ಸತ್ತುಹೋಯಿತೇ?” ಎಂದು ಪ್ರಶ್ನಿಸಿದ್ದಾರೆ.

Advertisements

ಈ ಕುರಿತು ಬಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾ. ಅಶೋಕ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, “ಘಟನೆ ಗಂಭೀರವಾಗಿದೆ. ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ : ನಾಳೆ ಶಾಲಾ ಕಾಲೇಜು ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಕಾರಣ ನಾಳೆ ಮಂಗಳವಾರ ರಜೆ...

Download Eedina App Android / iOS

X