ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

Date:

Advertisements

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ ಕುರಿತು ಸಮಾಜ ಕಲ್ಯಾಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ ಸಾಲಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಒಟ್ಟು 7,700 ಅರ್ಹ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಿ ಅಕ್ಟೋಬರ್ 2ರಂದು (ವಿಜಯದಶಮಿ ದಿನ) ನಡೆಯಲಿರುವ ಪ್ರವರ್ತನಾ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗುತ್ತಿದೆ.

ಆಯ್ಕೆಯಾದ ಯಾತ್ರಾರ್ಥಿಗಳನ್ನು ಕೆ.ಎಸ್.ಆರ್.ಟಿ.ಸಿ., ಇತರೆ ಸಾರಿಗೆ ಬಸ್ಸುಗಳು ಹಾಗೂ ರೈಲುಗಳ ಮೂಲಕ ನಾಗಪುರಕ್ಕೆ ಕಳುಹಿಸಿ, ಸೆಪ್ಟೆಂಬರ್ 30ರಿಂದ ಅಕ್ಟೋಬರ್ 4ರವರೆಗೆ ಪ್ರಯಾಣ ಹಾಗೂ ಹಿಂದಿರುಗುವ ವ್ಯವಸ್ಥೆ ಕಲ್ಪಿಸಲಾಗಿದೆ.

1000473855

ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಮಾನವೀಯತೆ ಮರೆತು ರೋಗಿಯನ್ನು ಚಳಿಯಲ್ಲಿ ಬಿಟ್ಟು ಹೋದ ಸಿಬ್ಬಂದಿ

Advertisements

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಗಸ್ಟ್ 25ರಿಂದ ಸೆಪ್ಟೆಂಬರ್ 9, 2025ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣ https://swd.karnataka.gov.in/ ಮೂಲಕ ಆನ್‌ಲೈನ್ ಮೂಲಕ ಸಲ್ಲಿಸಬಹುದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ಬೆಳಗಾವಿ : ಮಾನವೀಯತೆ ಮರೆತು ರೋಗಿಯನ್ನು ಚಳಿಯಲ್ಲಿ ಬಿಟ್ಟು ಹೋದ ಸಿಬ್ಬಂದಿ

ಮಾನವೀಯತೆ, ಕರುಣೆ ಎನ್ನುವುದು ಆಸ್ಪತ್ರೆಯ ಆವರಣದಲ್ಲಿ ಮರೆತುಹೋದಂತಾಗಿದೆ. ಬೆಳಗಾವಿ ಬಿಮ್ಸ್ ಮಲ್ಟಿ...

Download Eedina App Android / iOS

X