ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ ಆರೋಪಗಳ ಹಿನ್ನೆಲೆಯಲ್ಲಿ, ಪಾಲಕ್ಕಾಡ್ ಶಾಸಕರೂ ಆಗಿರುವ ಕಾಂಗ್ರೆಸ್ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಂಕೂಟ್ಟತಿಲ್ ಅವರನ್ನು ಪಕ್ಷವು ಎಲ್ಲ ಹುದ್ದೆಗಳಿಂದ ಕೆಳಗಿಳಿಯುವಂತೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಮಾಂಕೂಟತ್ತಿಲ್ ಯುವ ಕಾಂಗ್ರೆಸ್ ಮುಖ್ಯಸ್ಥ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಾಲಕ್ಕಾಡ್ ಕ್ಷೇತ್ರದಿಂದ ಶಾಸಕರಾಗಿರುವ ರಾಹುಲ್ ಅವರನ್ನು ಪಕ್ಷದಿಂದ ಕೈಬಿಟ್ಟರೂ, ಅವರು ಸ್ವತಂತ್ರ ಶಾಸಕರಾಗಿ ಕಾರ್ಯನಿರ್ವಹಿಸಬಹುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ, ಅವರ ಪಕ್ಷದ ಸದಸ್ಯತ್ವವನ್ನು ರದ್ದುಗೊಳಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ನಟಿ ಮತ್ತು ಮಾಜಿ ಪತ್ರಕರ್ತೆ ರಿನಿ ಆನ್ ಜಾರ್ಜ್, ಸುಮಾರು ಮೂರುವರೆ ವರ್ಷಗಳ ಹಿಂದೆ ಕೇರಳದ ಯುವ ರಾಜಕೀಯ ನಾಯಕನೊಬ್ಬ ತಮಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದು, ಹೋಟೆಲ್ ಕೊಠಡಿಗೆ ಆಹ್ವಾನಿಸಿದ್ದಾನೆ ಎಂದು ಆರೋಪಿಸಿದ್ದಾರೆ. ರಿನಿ ಆರೋಪಿಯ ಹೆಸರನ್ನು ಬಹಿರಂಗಪಡಿಸದಿದ್ದರೂ, ಬಿಜೆಪಿ ಕಾರ್ಯಕರ್ತರು ಈ ಆರೋಪ ರಾಹುಲ್ ಮಾಮಕೂಟ್ಟತಿಲ್ ವಿರುದ್ಧವೇ ಎಂದು ಆರೋಪಿಸಿ, ಪಾಲಕ್ಕಾಡ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನೆಯನ್ನು ತಡೆದಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತಬ್ಬಲಿ ಅಲೆಮಾರಿಗಳನ್ನು ‘ಶವಪೆಟ್ಟಿಗೆ’ಗೆ ಹಾಕಿದ ಕಾಂಗ್ರೆಸ್ ಸರ್ಕಾರ
ಇದೇ ವೇಳೆ, ಲೇಖಕಿ ಹನಿ ಭಾಸ್ಕರನ್ ಕೂಡ ರಾಹುಲ್ ತಮಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾಗಿ ಆರೋಪಿಸಿದ್ದಾರೆ. ಅಲ್ಲದೆ, ಇದರ ಜೊತೆಗೆ, ಮಲಯಾಳಂ ಟಿವಿ ಚಾನೆಲ್‌ವೊಂದು ರಾಹುಲ್ ಅವರದು ಎನ್ನಲಾದ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಮಾತನಾಡುವ ಧ್ವನಿಮುದ್ರಿಕೆಯನ್ನು ಪ್ರಸಾರ ಮಾಡಿದೆ. ಈ ಧ್ವನಿಮುದ್ರಿಕೆಯಲ್ಲಿ ಅಶ್ಲೀಲ ಮಾತಗಳನ್ನು ಆಡುವುದು ಕೇಳಿಸಿದೆ. ಆದರೆ, ರಾಹುಲ್ ಇದು ತಿರುಚಿದ ಧ್ವನಿಮುದ್ರಿಕೆ ಎಂದು ಅಲ್ಲಗಳೆದಿದ್ದಾರೆ.
ಕೇರಳ ಯುವ ಕಾಂಗ್ರೆಸ್‌ನಲ್ಲಿ ರಾಹುಲ್ ವಿರುದ್ಧ ಆಕ್ರೋಶ ಹೆಚ್ಚಾಗಿದ್ದು, ಅವರು ಆರೋಪಗಳಿಗೆ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಲಾಗಿದೆ. ರಾಜ್ಯ ಸಮಿತಿಯ ವಾಟ್ಸಾಪ್ ಗುಂಪಿನಲ್ಲಿ ಚರ್ಚೆಗಳು ನಡೆಯುತ್ತಿದ್ದು, ಓರ್ವ ಮಹಿಳಾ ನಾಯಕಿ ರಾಹುಲ್ ಮೌನ ಮುರಿಯಬೇಕೆಂದು ಆಗ್ರಹಿಸಿದ್ದಾರೆ. ಯುವ ಕಾಂಗ್ರೆಸ್ ರಾಜ್ಯ ಸಾಮಾನ್ಯ ಕಾರ್ಯದರ್ಶಿ ಆರ್ ವಿ ಸ್ನೇಹಾ, ಪ್ರಧಾನ ಕಾರ್ಯದರ್ಶಿ ವಿಪಿ ದುಲ್ಕಿಫೆಲ್ ಮತ್ತು ಚಾಂಡಿ ಒಮ್ಮನ್ ನೇತೃತ್ವದ ಗುಂಪು ರಾಹುಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ರಾಜ್ಯ ಉಪಾಧ್ಯಕ್ಷ ವಿಷ್ಣು ಸುನಿಲ್ ಪಂಥಲಂ ಕೂಡ ರಾಹುಲ್ ಮಾಂಕೂಟತ್ತಿಲ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ವಿರೋಧ ಪಕ್ಷದ ನಾಯಕ ವಿಡಿ ಸತೀಶನ್, “ನನಗೆ ಯಾವುದೇ ದೂರುಗಳ ಬಗ್ಗೆ ಗೊತ್ತಿಲ್ಲ. ಪಕ್ಷಕ್ಕೆ ಅಥವಾ ನನಗೆ ಯಾವುದೇ ದೂರು ಬಂದಿಲ್ಲ. ಆದರೆ, ಗಂಭೀರ ಆರೋಪಗಳನ್ನು ಪಕ್ಷ ಪರಿಗಣಿಸಿ ಕ್ರಮ ಕೈಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಾಹುಲ್ ಮಾಂಕೂಟತ್ತಿಲ್ ಇದುವರೆಗೆ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಆರೋಪಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಕಾಂಗ್ರೆಸ್‌ನಲ್ಲಿ ಚರ್ಚೆಗಳು ಮುಂದುವರಿದಿವೆ.