ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕ್ಷೇಮಾಭೀವೃದ್ಧಿ ಸಂಘದ ಮುಖಂಡರು ಆಗ್ರಹಿಸಿದ್ದಾರೆ.
ಯಾದಗಿರಿ ನಗರದಲ್ಲಿ ಬುಧವಾರ ಕಾರ್ಮಿಕ ಸಂಘಟನೆಯ ಮುಖಂಡ ನೇತೃತ್ವದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ಹೈಯ್ಯಾಳಪ್ಪ ಅಚ್ಚಿಕೇರಿ ಮಾತನಾಡಿ, ‘ಕಾರ್ಮಿಕ ಇಲಾಖೆಯಿಂದ 2023 ರಿಂದ ಇಲ್ಲಿಯವರೆಗೆ ಮಕ್ಕಳಿಗೆ ಸಹಾಯ ಧನ ನೀಡಿರುವುದಿಲ್ಲ. ಇದರಿಂದ ಬಡ ಮಕ್ಕಳು ತಮ್ಮ ಕಾರ್ಮಿಕ ಇಲಾಖೆಯ ಸೌಲಭ್ಯದಿಂದ ವಂಚಿತರಾಗಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.
‘ಕೂಡಲೇ ಯಾದಗಿರಿ ಜಿಲ್ಲೆಯ ಮಕ್ಕಳಿಗೆ ಸಹಾಯ ಧನ, ಹೆರಿಗೆ ಸಹಾಯ ಧನ ಸಮರ್ಪಕವಾಗಿ ನೀಡಬೇಕು, ಮಹಿಳಾ ಕಟ್ಟಡ ಕಾರ್ಮಿಕರಿಗೆ ವಸತಿ ಸೌಲಭ್ಯ ನೀಡಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಶಿವಶಂಕರ ವಿಶ್ವಕರ್ಮ, ಜಂಟಿ ಕಾರ್ಯದರ್ಶಿ ಬಸು ತಳವಾರ ಇದ್ದರು.
ಇದನ್ನೂ ಓದಿ : ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ