ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ ಹರಿದು, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮಕ್ಕೆ ನೀರು ನುಗ್ಗಿದೆ.
ಗ್ರಾಮದ 20ಕ್ಕೂ ಹೆಚ್ಚು ಮನೆಗಳನ್ನು ಅಧಿಕಾರಿಗಳು ಖಾಲಿ ಮಾಡಿಸಿ, ಸರ್ಕಾರಿ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. ಪ್ರಾದೇಶಿಕ ಆಯುಕ್ತೆ ಜಾನಕಿ.ಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ಗೋಕಾಕ್ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ಘಟಪ್ರಭಾ ನದಿ ಪಾತ್ರ ಬಿಟ್ಟು 2 ಕಿ.ಮೀ ದೂರಕ್ಕೆ ಹರಿಯುತ್ತಿದ್ದು, ಜಮೀನಿಗಳು ಜಲಾವೃತಗೊಂಡಿವೆ. ಪರಿಣಾಮವಾಗಿ ಕಬ್ಬು, ಜೋಳ, ಟೊಮ್ಯಾಟೊ, ಸೊಯಾಬೀನ್, ಉದ್ದು ಸೇರಿದಂತೆ ಹಲವು ಬೆಳೆಗಳು ಕೊಚ್ಚಿ ಹೋಗಿ ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಈ ಸುದ್ದಿ ಓದಿದ್ದಿರಾ ? ಬೆಳಗಾವಿ : ಜಿಲ್ಲೆಯಲ್ಲಿ ಇಂದು ತಂಪು ವಾತಾವರಣ – ಮಧ್ಯಮ ಮಳೆಯ ಮುನ್ಸೂಚನೆ
ಗ್ರಾಮಸ್ಥರು ಮತ್ತು ರೈತರು ಸರ್ಕಾರದಿಂದ ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.