ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

Date:

Advertisements

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದ ಎಂಟನೇ ಪ್ರಕರಣದಲ್ಲಿ ಪಾಕಿಸ್ತಾನ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. 2023ರಲ್ಲಿ ದೇಶಾದ್ಯಂತ ನಡೆದ ಪ್ರತಿಭಟನೆಗಳು ಮತ್ತು ಸರ್ಕಾರಿ ಹಾಗೂ ಸೇನಾ ಕಟ್ಟಡಗಳ ಮೇಲಿನ ದಾಳಿಗಳಿಗೆ ಸಂಬಂಧಿಸಿದಂತೆ ಖಾನ್ ವಿರುದ್ಧ ದಾಖಲಾದ ಪ್ರಕರಣಗಳಲ್ಲಿ ಈ ತೀರ್ಪು ನೀಡಲಾಗಿದೆ.

ಮುಖ್ಯ ನ್ಯಾಯಮೂರ್ತಿ ಯಾಹ್ಯಾ ಅಫ್ರಿದಿ ನ್ಯಾಯಮೂರ್ತಿಗಳಾದ ಮುಹಮ್ಮದ್ ಶಫಿ ಸಿದ್ದಿಕಿ ಮತ್ತು ಮಿಯಾಂಗುಲ್ ಹಸನ್ ಔರಂಗ್ ಝೇಬ್ ಅವರನ್ನೊಳಗೊಂಡ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ, ಆದೇಶ ಹೊರಡಿಸಿದ್ದು ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ಈ ಪೀಠವನ್ನು ವಿಶೇಷವಾಗಿ ಜಾಮೀನು ಅರ್ಜಿಗಳ ವಿಚಾರಣೆಗಾಗಿ ಪುನಾರಚಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ತಿಳಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು

Advertisements

ಆದರೆ, ಈ ಜಾಮೀನು ಆದೇಶದ ಹೊರತಾಗಿಯೂ ಇಮ್ರಾನ್ ಖಾನ್ ಶೀಘ್ರ ಬಿಡುಗಡೆಯಾಗುವ ಸಾಧ್ಯತೆ ಕಡಿಮೆಯಿದೆ. 2023ರಿಂದ ಜೈಲಿನಲ್ಲಿರುವ ಖಾನ್, ರಾಜ್ಯ ಉಡುಗೊರೆಗಳ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ ಮತ್ತು 190 ದಶಲಕ್ಷ ಪೌಂಡ್ ಲಂಚ ಪ್ರಕರಣದಲ್ಲೂ ಶಿಕ್ಷೆಗೊಳಗಾಗಿದ್ದಾರೆ. ಇದಲ್ಲದೆ, ಮೇ 9ರ ಹಿಂಸಾಚಾರಕ್ಕೆ ಸಂಬಂಧಿಸಿದ ಕೆಲವು ಇತರ ಪ್ರಕರಣಗಳ ವಿಚಾರಣೆಯೂ ಇನ್ನೂ ಬಾಕಿಯಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ ಅಮೆರಿಕ ದ್ವೇಷ: ಟ್ರಂಪ್‌ಗೆ ನೊಬೆಲ್ ನೀಡುವಂತೆ ಮೋದಿ ಶಿಫಾರಸು ಮಾಡಿದ್ರೆ ಎಲ್ಲವೂ ಸರಿಹೋಗತ್ತ?

ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್‌ ಅವರನ್ನು ಶಿಫಾರಸು ಮಾಡುವುದಾಗಿ...

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

Download Eedina App Android / iOS

X