ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕು ಎಂದು ಒತ್ತಾಯಿಸಿ ಮಹಾನಾಯಕ ದಲಿತಸೇನೆ ಸಂಘಟನೆ ಚಿತ್ರದುರ್ಗ ಉಪವಿಭಾಗಾಧಿಕಾರಿಗಳು ಹಾಗೂ ಹಿರಿಯೂರು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಮಹಾನಾಯಕ ದಲಿತಸೇನೆ ಸಂಘಟನೆ ಮುಖಂಡರು “ಇತ್ತೀಚೆಗೆ ಕರ್ನಾಟಕ ಸರ್ಕಾರವು ಒಳಮೀಸಲಾತಿ ಜಾರಿ ಮಾಡಿದ್ದು, ಜಸ್ಟಿಸ್ ನಾಗಮೋಹನ್ ದಾಸ್ ಒಳಮೀಸಲಾತಿ ವರ್ಗೀಕರಣ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿ ತೀರ ಹಿಂದುಳಿದ ಅಲೆಮಾರಿ ಸಮುದಾಯಗಳಿಗೆ ಶೇ. 1 ಮೀಸಲು ಕಲ್ಪಿಸಿರುತ್ತಾರೆ. ಆದರೆ ಸಿದ್ದರಾಮಯ್ಯನವರ ಸರ್ಕಾರವು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದ ಅಲೆಮಾರಿ ಸಮುದಾಯಗಳನ್ನು ಸ್ಪೃಶ್ಯ ಪರಿಶಿಷ್ಟ ಜಾತಿಯವರೊಂದಿಗೆ ಸೇರಿಸಿ ಅನ್ಯಾಯ ಮಾಡಿದ್ದಾರೆ” ಎಂದು ಕಿಡಿಕಾರಿದರು.
“ಅಲೆಮಾರಿ ಜಾತಿಗಳಿಗೆ ಇದರಿಂದ ದೊಡ್ಡ ಅನ್ಯಾಯವಾಗಿದೆ. ಅಲೆಮಾರಿ ಜನಾಂಗದವರಿಗೆ ಶಿಕ್ಷಣ ಮತ್ತು ಉದ್ಯೋಗಗಳು ಮರೀಚಿಕೆಯಾಗಿದೆ. ಸಾಮಾಜಿಕ ನ್ಯಾಯದ ಪ್ರಕಾರ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿಯನ್ನು ಕಲ್ಪಿಸಬೇಕು ಎಂದು ಮಹಾನಾಯಕ ದಲಿತ ಸೇನೆ ಸಂಘಟನೆಯು ಒತ್ತಾಯಿಸುತ್ತದೆ” ಎಂದು ಆಗ್ರಹಿಸಿ ಚಿತ್ರದುರ್ಗ ಉಪವಿಭಾಗಾಧಿಕಾರಿಗಳಾದ ಮಹಬೂಬ್ ಜಿಲಾನಿ ಖುರೇಷಿ ಹಾಗೂ ತಹಶೀಲ್ದಾರ್ ಎಂ.ಸಿದ್ದೇಶ್ ರವರಿಗೆ ಮನವಿ ಪತ್ರವನ್ನು ನೀಡಲಾಯಿತು
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ಪ್ರಕರಣ; ಮರ್ಯಾದೆ ಹತ್ಯೆ, ಸಾಮೂಹಿಕ ಕೃತ್ಯದ ಶಂಕೆ ವ್ಯಕ್ತಪಡಿಸಿದ ದಲಿತ ಸಂಘಟನೆಗಳು
ಈ ಸಂದರ್ಭದಲ್ಲಿ ಮಹಾನಾಯಕ ದಲಿತಸೇನೆ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷರಾದ ಕೆ.ಪಿ.ಶ್ರೀನಿವಾಸ್. ಅಲ್ ಇಂಡಿಯಾ ಬಹುಜನ ಸಮಾಜಪಾರ್ಟಿ ಜಿಲ್ಲಾಧ್ಯಕ್ಷರಾದ ಹನುಮಂತರಾಯ ಬ್ಯಾಡರಹಳ್ಳಿ, ತಾಲ್ಲೂಕು ಅಧ್ಯಕ್ಷರಾದ ಜಗದೀಶ್ ಅಬ್ಬಿನಹೊಳೆ. ದಸಂಸ (ಪ್ರೊ.ಬಿ.ಕೃಷ್ಣಪ್ಪ)ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಕದುರಪ್ಪ ಶಿಡ್ಲಯ್ಯನಕೋಟೆ, ಮಾನವ ಬಂಧುತ್ವ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಮಾರುತೇಶ್ ಕೂನಿಕೆರೆ, ಶಿವು ಖಂಡೇನಹಳ್ಳಿ, ಆಲೂರು ಕಾಂತರಾಜ್, ಮರಡಿಹಳ್ಳಿ ತಿಪ್ಪೇಸ್ವಾಮಿ, ಮಹೇಶ್ ಪಟ್ರೆಹಳ್ಳಿ, ಮಹೇಶ್ ಕಾಟನಾಯಕನಹಳ್ಳಿ, ಮಹಾಂತೇಶ್ ಬೀರೇನಹಳ್ಳಿ ಪ್ರಕಾಶ ಸೇರಿದಂತೆ ಸಂಘಟನೆಗಳ ಮುಖಂಡರು ಕಾರ್ಯಕರ್ತರು ಹಾಜರಿದ್ದರು.
https://shorturl.fm/NHgH9