ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಕೊಡಗು ಜಿಲ್ಲೆ ಪ್ರವೇಶಿಸದಂತೆ ಹೊರಹಾಕಿದ್ದಾರೆ.
ಕೊಡಗು ಜಿಲ್ಲೆ ಪ್ರವೇಶಕ್ಕೆ ನಿರ್ಬಂಧವಿದ್ದರು, ಕುಶಾಲನಗರದಲ್ಲಿ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಭಕ್ತಾಭಿಮಾನಿ ವೇದಿಕೆ ಧರ್ಮಸ್ಥಳ ವಿರುದ್ಧ ನಿರಾಧಾರ ಆರೋಪ ಮಾಡುತ್ತಿರುವವರನ್ನು ಬಂಧಿಸುವಂತೆ ಆಗ್ರಹಿಸಿ ನಡೆಸುತಿದ್ದ ಪ್ರತಿಭಟನೆಯಲ್ಲಿ
ಪಾಲ್ಗೊಳ್ಳಲು ಆಗಮಿಸಿರುವುದಾಗಿ ತಿಳಿದುಬಂದಿದೆ.
ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ಮಾರ್ಗವಾಗಿ ಬೈಲುಕುಪ್ಪೆವರೆಗೆ ಕಾರಿನಲ್ಲಿ ತೆರಳಿ. ಅಲ್ಲಿಂದ ಪೊಲೀಸರ ಕಣ್ಣು ತಪ್ಪಿಸುವ ಸಲುವಾಗಿ ಆಟೋ ಏರಿ ಕುಶಾಲನಗರ ತಲುಪಿ ಪ್ರತಿಭಟನಾ ವೇದಿಕೆ ಏರುವ ಸಮಯದಲ್ಲಿ ಪೊಲೀಸರು ಪ್ರವೇಶಿಸಿ ವಶಕ್ಕೆ ಪಡೆದಿದ್ದಾರೆ.
ಕೊಡಗು ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಇರುವುದನ್ನು ಪೊಲೀಸರು ಪುನೀತ್ ಕೆರೆಹಳ್ಳಿಗೆ ಮನದಟ್ಟು ಮಾಡಿದ್ದಾರೆ. ಅದೇ ಸಮಯದಲ್ಲಿ ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ತೀವ್ರವಾಗಿ ವಿರೋಧಿಸಿದ್ದಾರೆ ಎನ್ನಲಾಗಿದೆ.
ಈ ವಿಶೇಷ ವರದಿ ಓದಿದ್ದೀರಾ? ಮೈಸೂರು | ಅರಸು ಮರೆತ ಸರ್ಕಾರ; ಬೆಟ್ಟದತುಂಗ, ಕಲ್ಲಹಳ್ಳಿ ಗ್ರಾಮಗಳ ದತ್ತು ಪಡೆದಿದ್ದ ಸಿಎಂ ಸಿದ್ದರಾಮಯ್ಯ
ಹೆಚ್ಚುವರಿ ಪೊಲೀಸ್ ಅಧೀಕ್ಷಕ ದಿನೇಶ್ ಕುಮಾರ್ ಮತ್ತು ಕುಶಲನಗರ ಡಿವೈಎಸ್ಪಿ ಚಂದ್ರಶೇಖರ್ ಸೇರಿದಂತೆ ಇನ್ನಿತರೇ ಅಧಿಕಾರಿಗಳು ಮದ್ಯ ಪ್ರವೇಶಿಸಿ ವೇದಿಕೆಯಿಂದ ಕೆಳಗಿಳಿಸಿಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕರರ ನಡುವೆ ವಾಗ್ವಾದ ನಡೆದಿದೆ. ಪೊಲೀಸರು ಪುನೀತ್ ಕೆರೆಹಳ್ಳಿ ಮನವೊಲಿಸಿ ಖಾಸಗಿ ಕಾರಿನಲ್ಲಿ ಕೊಡಗು ಜಿಲ್ಲೆಯಿಂದ ಪಿರಿಯಾಪಟ್ಟಣ ಮಾರ್ಗವಾಗಿ ಹೊರಕಳಿಸಿದ್ದಾರೆಂದು ತಿಳಿದು ಬಂದಿದೆ.