ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

Date:

Advertisements

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರುಗಳು ಧರ್ಮಸ್ಥಳದ ಸೌಜನ್ಯ ಮನೆಯವರೆಗೆ ವಾಹನ ಜಾಥಾ ನಡೆಸಿ ಸೌಜನ್ಯ ಮನೆಗೆ ಭೇಟಿ ಅವರು ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿ ಸೌಜನ್ಯ ಪರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕ‌ರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಮಾತನಾಡಿ, ಸೌಜನ್ಯ ಪ್ರಕರಣ ಮುಗಿದ ಅಧ್ಯಾಯವಲ್ಲ. ಆ ಪ್ರಕರಣವನ್ನು ಸರಿಯಾಗಿದ ರೀತಿಯಲ್ಲಿ ತನಿಖೆ ಮಾಡದೇ ಸರ್ಕಾರ ಈ ಪ್ರಕರಣಯನ್ನು ಕೈಬಿಟ್ಟಿದೆ. ಸೌಜನ್ಯ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯಾದ್ಯಂತ ಕೂಗು ಕೇಳಿ ಬರುತ್ತಿದೆ. ಈ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮರು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

Advertisements

ಈ ಸಂಬಂಧ ಉಚ್ಚ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುವುದು. ಸರ್ಕಾರ ಸೂಕ್ತವಾದ ತನಿಖೆಗೆ ಮುಂದಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಗ್ರವಾದ ಪ್ರತಿಭಟನೆಯನ್ನು ಮಾಡಲಾಗುವುದು ಎಂದು ಅವರು ಹೇಳಿದರು.

ಈ ವೇಳೆ ವಿವಿಧ ಸಂಘಟನೆಗಳ ಮುಖಂಡರುಗಳಾದ ನ್ಯಾಯವಾದಿ ಹರಿರಾಂ, ನಟರಾಜ್, ಗುರುಮೂರ್ತಿ, ಕೇಶವ ಮೂರ್ತಿ, ದೇವರಾಜ್, ಚಂದ್ರು, ಜಯಂತಿಗೌಡ, ಚೆನ್ನಕೇಶವ, ಜಾನಕಿ, ಸವಿತ ಹಾಗು ಇತರರು ವಹಿಸಿದ್ದರು. ತಮ್ಮ ಬೇಡಿಕೆಗಳ ಬಗ್ಗೆ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಮನವಿ ಸಲ್ಲಿಸುವುದಾಗಿ ಹೋರಾಟಗಾರರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X