ತುಮಕೂರು | ಸಿದ್ದಗಂಗಾ ಮಠದ ಗೋಕಟ್ಟೆಯಲ್ಲಿ ಮುಳುಗಿ ನಾಲ್ವರು ಸಾವು

Date:

Advertisements
  • ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ದಾರುಣ ಘಟನೆ
  • ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಅಧಿಕಾರಿಗಳು

ಇಬ್ಬರು ವಿದ್ಯಾರ್ಥಿಗಳು ನೀರಿಗೆ ಬಿದ್ದಾಗ ಅವರನ್ನು ರಕ್ಷಿಸಲು ಹೋಗಿ ಒಟ್ಟು ನಾಲ್ವರು ನೀರುಪಾಲಾಗಿರುವ ದಾರುಣ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿರುವ ಸಿದ್ದಗಂಗಾ ಮಠದ ಬಳಿ ಭಾನುವಾರ(ಆ.13) ನಡೆದಿದೆ.

ಸಿದ್ದಗಂಗಾ ಮಠದ ಹಿಂಭಾಗದ ನೀರಿನ ಕೃಷಿ ಹೊಂಡ ಗೋಕಟ್ಟೆಯಲ್ಲಿ ಬಿದ್ದು ಶಂಕರ್ (11), ರಕ್ಷಿತ್ (11), ಲಕ್ಷ್ಮಿ (50) ಹಾಗೂ ಮಹದೇವಪ್ಪ (51) ಎಂಬವರು ಸಾವನ್ನಪ್ಪಿದ್ದಾರೆ.

ಶಂಕರ್ ಹಾಗೂ ರಕ್ಷಿತ್‌ನನ್ನು ರಕ್ಷಿಸಲು ಲಕ್ಷ್ಮಿ ಹಾಗೂ ಮಹದೇವಪ್ಪ ಧಾವಿಸಿದಾಗ ದುರ್ಘಟನೆ ಸಂಭವಿಸಿದೆ.

Advertisements

ಸಿದ್ದಗಂಗಾ ಮಠದ ವಿದ್ಯಾರ್ಥಿಗಳಾದ ಶಂಕರ್ ಹಾಗೂ ರಕ್ಷಿತ್ ರಾಮನಗರ ನಿವಾಸಿಗಳು. ಲಕ್ಷ್ಮಿ ನೆಲಮಂಗಲ ಹಾಗೂ ಮಹಾದೇವಪ್ಪ ಯಾದಗಿರಿ ನಿವಾಸಿಯಾಗಿದ್ದು, ವಿದ್ಯಾರ್ಥಿಗಳನ್ನು ರಕ್ಷಿಸಲು ಹೋಗಿದ್ದಾಗ ನಾಲ್ವರೂ ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ? ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಹೇಳಿಕೆ : ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ

ಅದೃಷ್ಟವಶಾತ್ ನೀರಿಗೆ ಇಳಿದಿದ್ದ ರಂಜಿತ್ ಎಂಬ ವಿದ್ಯಾರ್ಥಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

WhatsApp Image 2023 08 13 at 5.55.57 PM

ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡುತ್ತಿದ್ದ ಮಗನನ್ನು ನೋಡಲು ತಾಯಿ ಬಂದಿದ್ದರು ಎಂದು ತಿಳಿದುಬಂದಿದೆ. ಒಟ್ಟಾರೆ ವಿದ್ಯಾರ್ಥಿಯನ್ನು ರಕ್ಷಿಸಲು ಹೋದ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಕ್ಯಾತ್ಸಂದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಅಗ್ನಿಶಾಮಕ ಹಾಗೂ ಮುಳುಗು ತಜ್ಞರು ದೌಡಾಯಿಸಿದ್ದು, ಮೃತದೇಹಗಳನ್ನು ಹುಡುಕಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X