ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ಯನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ ವ್ಯಕ್ತಿಗಳು ಮತದಾರರ ಪಟ್ಟಿಗೆ ಮರು ಸೇರ್ಪಡೆಗಾಗಿ ಆನ್‌ಲೈನ್ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಭೌತಿಕವಾಗಿ ಸಲ್ಲಿಸುವ ಅಗತ್ಯವಿಲ್ಲ. ಈ ಮೊದಲು ತಿಳಿಸಿದ 11 ದಾಖಲೆಗಳು ಅಥವಾ ಆಧಾರ್ ಕಾರ್ಡ್ ಅನ್ನು ದಾಖಲೆಯಾಗಿ ಸಲ್ಲಿಸಬಹುದು ಎಂದು ಹೇಳಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು
ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಗಾಗಿ ಮತದಾರರಿಗೆ 11 ದಾಖಲೆಗಳು ಸಲ್ಲಿಕೆಗೆ ಅವಕಾಶವಿದೆ. ಮತದಾರರು ಪಟ್ಟಿಯಲ್ಲಿರುವ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬೇಕಾಗುತ್ತದೆ. ಇದೀಗ ದಾಖಲೆಗಳ ಪಟ್ಟಿ ಆಧಾರ್ ಕಾರ್ಡ್‌ನ್ನು ಸೇರಿಸಿಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.