ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ (ನಾಳೆ ಆಗಸ್ಟ್ 23) 15 ಜೋಡಿಗಳ ಸರಳ ಸಾಮೂಹಿಕ ವಿವಾಹ ಸಮಾರಂಭವನ್ನು ಹಮ್ಮಿಕೊಂಡಿದೆ.
ಬಂಟ್ವಾಳ ತಾಲೂಕಿನ ನೇರಳಕಟ್ಟೆಯ ಜನಪ್ರಿಯ ಗಾರ್ಡನ್ ಸಭಾಂಗಣದಲ್ಲಿ ಬೆಳಿಗ್ಗೆ 10.00ಕ್ಕೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್‌ವೈಎಸ್ ದ.ಕ. ಜಿಲ್ಲಾ ಉಪಾಧ್ಯಕ್ಷ ಮೌಲಾನಾ ಸಿರಾಜುದ್ದೀನ್ ಸಖಾಫಿ ನಿಖಾಹ್ ನೇತ್ರತ್ವ ವಹಿಸಲಿದ್ದು, ಎಸ್‌ಕೆಎಸ್‌ಎಸ್‌ಎಫ್, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ, ಮೌಲಾನಾ ಅನೀಸ್ ಕೌಸರಿ ವಧು ವರರಿಗೆ ಸಂದೇಶ ನೀಡಲಿದ್ದಾರೆ.
ಇದನ್ನು ಓದಿದ್ದೀರಾ? ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ
ಅಲ್ ವಫಾ ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಮುಹಮ್ಮದ್ ಹನೀಫ್ ಗೋಳ್ತಮಜಲು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್, ಬಾವಾ ಫಿಶ್ ಮೀಲ್ ಆಂಡ್ ಆಯಿಲ್ ಕಂಪೆನಿಯ ಆಡಳಿತ ನಿರ್ದೇಶಕ ರಿಯಾಝ್ ಎ.ಕೆ. ಬಾವಾ, ಉದ್ಯಮಿ ವಿ.ಕೆ. ಅಬ್ದುಲ್ ಖಾದರ್ ಬದ್ರಿಯಾ, ಎಕ್ಸ್‌ಪರ್ಟೈಸ್ ಕಂಟ್ರಾಕ್ಟಿಂಗ್ ಕಂಪೆನಿಯ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕರ್ನೀರೆ ಹಾಗೂ ಜನಪ್ರಿಯ ಫೌಂಡೇಶನ್‌ನ ಅಧ್ಯಕ್ಷ ಡಾ. ಅಬ್ದುಲ್ ಬಶೀರ್ ವಿ.ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

