ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳಾಗಿ(ಸಿಇಓ) ಸೇವೆ ಸಲ್ಲಿಸುತ್ತಿದ್ದ ಶ್ರೀ ಭರತ್ ಎಸ್. ಅವರನ್ನು ತಕ್ಷಣದಿಂದಲೇ ವರ್ಗಾವಣೆ ಮಾಡಿ, ಬೆಂಗಳೂರಿನ ಪ್ರೌಢಶಿಕ್ಷಣ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ
ಸದ್ಯ ಗದಗ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿರುವ ಶ್ರೀ ಸಿ.ಎನ್. ಶ್ರೀಧರ ಅವರಿಗೆ ತಾತ್ಕಾಲಿಕವಾಗಿ ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ (CEO) ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಲಾಗಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಯಲ್ಲಿದ್ದು ಮುಂದಿನ ಸೂಚನೆವರೆಗೂ ಮುಂದುವರಿಯಲಿದೆ.