ಭಾರತೀಯರು ಮತ್ತು ಏಷ್ಯನ್ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಅಪಘಾತವಾಗಿ ಭಾರತೀಯರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಆಗಸ್ಟ್ 22ರಂದು ಪ್ರವಾಸಿ ಬಸ್ ನಯಾಗರಾ ಜಲಪಾತದಿಂದ ನ್ಯೂಯಾರ್ಕ್ ನಗರಕ್ಕೆ ಹಿಂತಿರುಗುತ್ತಿದ್ದಾಗ 54 ಜನರಿದ್ದ ಬಸ್ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ.
