ಹಾಸನ | ಉತ್ತಮ ವಿದ್ಯಾಭ್ಯಾಸ ಇದ್ದರೆ ಆರ್ಥಿಕ ಸ್ವಾವಲಂಬನೆ ಸಾಧ್ಯ: ಡಿಸಿ ಲತಾ ಕುಮಾರಿ

Date:

Advertisements

ಪ್ರತಿಯೊಂದು ಮಗುವೂ ಉತ್ತಮ ವಿದ್ಯಾಭ್ಯಾಸ ಪಡೆದು ಮುಂದಿನ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು. ಉನ್ನತ ವಿದ್ಯಾಭ್ಯಾಸದಿಂದ ಆರ್ಥಿಕ ಸ್ವಾವಲಂಬನೆ ಸಾಧ್ಯ ಎಂದು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ SSLC ಉತ್ತಮ ಫಲಿತಾಂಶ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಗುಣಮಟ್ಟದ ಭೋದನೆ ಮತ್ತು ಕಲಿಕೆಗೆ ಕ್ರಮ ಕೈಗೊಳ್ಳುವ ಬಗ್ಗೆ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

“ಶಿಕ್ಷಕರು ಉತ್ತಮವಾಗಿ ಭೋಧನೆ ಮಾಡುವ ಮೂಲಕ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಲು ಮುತುವರ್ಜಿ ವಹಿಸಬೇಕು. ಈ ಕಾರ್ಯಕ್ರಮವು ಮಕ್ಕಳ ಉತ್ತಮ ಭವಿಷ್ಯಕ್ಕೆ ಬುನಾದಿ ಆಗಿದ್ದು, ಜೀವನದಲ್ಲಿ ಮಕ್ಕಳು ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿ ಆಗುವಂತೆ ಈ ಕಾರ್ಯಕ್ರಮದ ಮೂಲಕ ಪ್ರಯತ್ನ ನಡೆಸಲಾಗುತ್ತಿದೆ. ಒಂದು ಕಾಲದಲ್ಲಿ ಉದ್ಯೋಗಂ ಪುರುಷ ಲಕ್ಷಣಂ ಎಂದು ಹೇಳಲಾಗುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಉದ್ಯೋಗ ಸರ್ವರ ಲಕ್ಷಣ ಎಂಬತ್ತಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಮಗುವೂ ಹೆಣ್ಣು ಗಂಡು ಎಂಬ ಭೇದವಿಲ್ಲದೆ ಪ್ರತಿಯೊಬ್ಬರು ಕೆಲಸ ಮಾಡುವ ಮೂಲಕ ಆರ್ಥಿಕ ಸಬಲತೆ ಸಾಧಿಸಬೇಕು” ಎಂದರು.

Advertisements

“ಎಸ್.ಎಸ್.ಎಲ್.ಸಿ ಹಂತದಲ್ಲಿಯೇ ಮುಂದೆ ಯಾವ ರೀತಿಯ ಕೆಲಸ ಮಾಡಬೇಕು ಎಂದು ನಿರ್ಧರಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ವಿಷಯಗಳನ್ನು ಆಯ್ಕೆ ಮಾಡಿಕೊಂಡು ವಿದ್ಯಾಭ್ಯಾಸ ನಡೆಸಿ ಎಂದು ತಿಳಿಸಿದರಲ್ಲದೆ, ಜೀವನಕ್ಕೆ ವಿದ್ಯೆ ಭದ್ರ ಬುನಾದಿ, ವಿದ್ಯಾಭ್ಯಾಸ ಮುಗಿಸಿದ ತಕ್ಷಣ ಕೆಲಸ ದೊರೆಯುವುದಿಲ್ಲ. ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಕೆಲಸ ಪಡೆದುಕೊಳ್ಳಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಹಾಸನ | ಕುಟುಂಬ ಸಮೇತ ಹಾಸನಾಂಬ ದೇವಿ ದರ್ಶನ ಪಡೆದ ಡಿಸಿಎಂ ಡಿ.ಕೆ ಶಿವಕುಮಾರ್

“ಮಕ್ಕಳು ಯಾವುದೇ ನೆಪ ನೀಡಿ ಶಾಲೆಗೆ ಗೈರು ಹಾಜರಾಗಬಾರದು. ಈ ಕಾರ್ಯಕ್ರಮದ ಮೂಲಕ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪ್ರಯತ್ನಿಸಲಾಗಿ 6ನೇ ವಾರ ತಲುಪಿದೆ, ಜೀವನದಲ್ಲಿ ಯಶಸ್ಸು ಕಾಣಲು ಎಲ್ಲಾ ಸುಖವನ್ನು ತ್ಯಾಗ ಮಾಡಿ ಸಾಧನೆ ಮಾಡಬೇಕು ಎಂದ ಅವರು ಸಮಾಜದಲ್ಲಿ ಗೌರವ ಪಡೆಯಲು, ನೆಮ್ಮದಿ ಬದುಕು ಕಟ್ಟಿಕೊಳ್ಳಲು, ದೇಶಕ್ಕೆ ಕೊಡುಗೆ ನೀಡಲು ಒಳ್ಳೆಯ ದಾರಿ ಆಯ್ಕೆ ಮಾಡಿಕೊಂಡು ಉತ್ತಮ ದಾರಿಯಲ್ಲಿ ನಡೆಯಬೇಕು ಆರ್ಥಿಕ ಅಭಿವೃದ್ಧಿ ಹೊಂದಬೇಕು” ಎಂದರು.

ಶಾಲಾ ಮಕ್ಕಳಿಗೆ ಗೌರಿ ಗಣೇಶ ಹಬ್ಬದ ಶುಭಾಶಗಳನ್ನು ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಲರಾಮ, ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಕರವೇ ಆಗ್ರಹ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗ್ರಾಮೀಣ ಭಾಗದ ರಸ್ತೆಗಳ ದುರಸ್ತಿಗೆ ಜನಪ್ರತಿನಿಧಿಗಳು,...

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ...

ಹಾಸನ | ವಿಫಲಗೊಂಡ ಬಾವಿಗಳ ಮುಚ್ಚಲು ಕ್ರಮವಹಿಸಿ: ಡಿಸಿ ಲತಾ ಕುಮಾರಿ

ಹಾಸನ ಜಿಲ್ಲೆಯಲ್ಲಿ ಕೊಳವೆ ಬಾವಿಗಳನ್ನು ಕೊರೆಯಲು ಅನುಮತಿ ಪಡೆಯಬೇಕು ಜೊತೆಗೆ ವಿಫಲಗೊಂಡ...

ಶಿವಮೊಗ್ಗ | ಜಾನುವಾರುಗಳ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಶಿವಮೊಗ್ಗ, ಜಾನುವಾರು ಕಳವು ಪ್ರಕರಣದ ಐವರು ಆರೋಪಿಗಳನ್ನು ಚಿಕ್ಕಮಗಳೂರಿನ ಕಳಸ ...

Download Eedina App Android / iOS

X