ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆ.1 ರಂದು 10 ಗಂಟೆಗೆ ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಲ್ಪಸಂಖ್ಯಾತ ಸಮುದಾಯದವರ ಕುಂದುಕೊರತೆ ಸಭೆಯನ್ನು ನಡೆಸಲಾಗುತ್ತದೆ.
ಈ ಸಂಬಂಧ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ) ಜನಾಂಗದವರಿಗೆ/ ಸಮುದಾಯದವರಿಗೆ ಸಂಬಂಧಿಸಿದಂತೆ ಕುಂದುಕೊರತೆ/ ಆಹವಾಲು/ ಮನವಿಗಳು ಇದ್ದಲ್ಲಿ, ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ರಸ್ತೆ, ಹಾಸನ ಇಲ್ಲಿಗೆ ಆ.25 ರೊಳಗೆ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಆಕಾಶವಾಣಿ ಹಿಂಭಾಗ, ಹಾಸನ. ದೂರವಾಣಿ ಸಂಖ್ಯೆ: 08172- 268373/267373ನ್ನ ಸಂರ್ಪಕಿಸಬಹುದಾಗಿದೆ. ಹಾಗೂ ಆಯಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಇದನ್ನೂ ಓದಿ: ಹಾಸನ | ಕುಟುಂಬ ಸಮೇತ ಹಾಸನಾಂಬ ದೇವಿ ದರ್ಶನ ಪಡೆದ ಡಿಸಿಎಂ ಡಿ.ಕೆ ಶಿವಕುಮಾರ್