ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

Date:

Advertisements

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು ತಾಂತ್ರಿಕ ದೋಷದಿಂದಾಗಿ ರದ್ಧು ಮಾಡಲಾಗಿದೆ. ಈ ವಾರದಲ್ಲಿ ಮೂರನೇ ಘಟನೆ ಇದಾಗಿದೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು 3.5 ಗಂಟೆಗಳ ಕಾಲ ಕಾದಿದ್ದಾರೆ ಎಂದು ಹೇಳಲಾಗಿದೆ.

ಈ ಮಾರ್ಗದ ಪ್ರಯಾಣದ ಸಮಯ ಕೇವಲ ಒಂದು ಗಂಟೆ 50 ನಿಮಿಷಗಳಾಗಿದೆ. ವಿಮಾನವನ್ನು ಮತ್ತೆ ಪಾರ್ಕಿಂಗ್ ಸ್ಥಳಕ್ಕೆ ತಂದು ಎಲ್ಲರನ್ನೂ ಕೆಳಗಿಸಲಾಗಿದೆ. ಭದ್ರತಾ ತಪಾಸಣೆಗಳನ್ನು ಪುನಃ ಮಾಡಿದ ನಂತರ ಮಧ್ಯಾಹ್ನ 12.36ಕ್ಕೆ ವಿಮಾನಯಾನ ಸಂಸ್ಥೆಯು ವ್ಯವಸ್ಥೆ ಮಾಡಿದ ಪರ್ಯಾಯ ವಿಮಾನವನ್ನು ಪ್ರಯಾಣಿಕರು ಹತ್ತಿದ್ದಾರೆ.

ಇದನ್ನು ಓದಿದ್ದೀರಾ? ಏರ್ ಇಂಡಿಯಾ ವಿಮಾನ ದುರಂತ; ಇಲ್ಲಿವರೆಗೆ ಏನೇನು?

Advertisements

ಛತ್ರಪತಿ ಶಿವಾಜಿ ಮಹಾರಾಜ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಿಂದ ಬೆಳಿಗ್ಗೆ 9.15ಕ್ಕೆ ಹೊರಡಬೇಕಿತ್ತು. ಆದರೆ ಆ ವಿಮಾನದ ಪ್ರಯಾಣಿಕರಿಗೆ ಮಧ್ಯಾಹ್ನ 12.36ಕ್ಕೆ ವಿಮಾನ ವ್ಯವಸ್ಥೆ ಮಾಡಲಾಗಿದೆ.

ಆಗಸ್ಟ್ 17ರಂದು, ಎರಡು ಏರ್ ಇಂಡಿಯಾ ವಿಮಾನಗಳು ರದ್ದಾಗಿದೆ. ದೆಹಲಿ-ಲೇಹ್ ಮತ್ತು ಮುಂಬೈ-ಅಹಮದಾಬಾದ್ ವಿಮಾನಗಳನ್ನು ರದ್ದು ಮಾಡಲಾಗಿದ್ದು, ಕ್ರಮವಾಗಿ ನಾಲ್ಕು ಮತ್ತು ಆರು ಗಂಟೆಗಳ ವಿಳಂಬದ ನಂತರ ಪ್ರಯಾಣಿಕರು ಬದಲಿ ವಿಮಾನದಲ್ಲಿ ಹಾರಾಟ ನಡೆಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

ಲಕ್ನೋ | ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡು ಸುಳ್ಳು ಆರೋಪ ಸೃಷ್ಟಿ: ವಕೀಲನಿಗೆ ಜೀವಾವಧಿ ಶಿಕ್ಷೆ

ದಲಿತ ಮಹಿಳೆಯ ಗುರುತು ದುರುಪಯೋಗಿಸಿಕೊಂಡ ಮತ್ತು ಸುಳ್ಳು ಆರೋಪಗಳನ್ನು ದಾಖಲಿಸಿದ ವಕೀಲರೊಬ್ಬರಿಗೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

Download Eedina App Android / iOS

X