ವಿಜಯಪುರ | ಹೆಣ್ಣನ್ನು ಪೂಜಿಸುವ ನಾಡಿನಲ್ಲಿ ಮಹಿಳೆಯರ ಸುರಕ್ಷತೆ ಬಹುದೊಡ್ಡ ಪ್ರಶ್ನೆಯಾಗಿದೆ: ಪ್ರೊ. ವಿಜಯಾ ಬಿ ಕೋರಿಶೆಟ್ಟಿ

Date:

Advertisements

ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು ದುರಂತ ಮತ್ತು ವಿಪರ್ಯಾಸ. ಕಾನೂನು ದೌರ್ಜನ್ಯವನ್ನು ಅಪರಾಧವೆಂದು ಘೋಷಿಸಿದರೂ, ಸಮಾಜದಲ್ಲಿ ಮಹಿಳೆಯ ಸುರಕ್ಷತೆ ಇನ್ನೂ ದೊಡ್ಡ ಪ್ರಶ್ನೆಯಾಗಿದೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ವಿಷಾದ ವ್ಯಕ್ತಪಡಿಸಿದರು.

ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ವಿಜಯಪುರ ನಗರದ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದಿಂದ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

“ವಿದ್ಯಾರ್ಥಿನಿಯರು ತಮ್ಮ ರಕ್ಷಣೆಗೆ ರಕ್ಷಣಾ ಸಾಮಗ್ರಿಗಳನ್ನು ಹೊಂದಿರಬೇಕು. ಸ್ವರಕ್ಷಣಾ ಕೌಶಲ್ಯಗಳನ್ನು ಕಲಿತುಕೊಳ್ಳಬೇಕು ಹಾಗೂ ಯಾವುದೇ ಸಂದರ್ಭದಲ್ಲಿಯೂ ಎದೆಗುಂದದೆ ಪ್ರತಿರೋಧಿಸಬೇಕು” ಎಂದು ಸಲಹೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ವಿಜಯಪುರ | ರಸ್ತೆ ಗುಂಡಿಗಳನ್ನು ಮುಚ್ಚಿದ ದಲಿತ ಮುಖಂಡರು

ಕಾರ್ಯಕ್ರಮದಲ್ಲಿ ಮಹಿಳಾ ಅಧ್ಯಯನ ವಿಭಾಗ ಮತ್ತು ಕೇಂದ್ರದ ನಿರ್ದೇಶಕಿ ಪ್ರೊ. ಲಕ್ಷ್ಮಿದೇವಿ ವೈ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಟನೆಯ ವೇಳೆ ಮೌಲ್ಯಮಾಪನ ಕುಲಸಚಿವ ಪ್ರೊ.ಬಸವರಾಜ ಲಕ್ಕಣ್ಣವರ, ಪ್ರಾಧ್ಯಾಪಕರಾದ ಪ್ರೊ. ಪಿ ಜಿ ತಡಸದ, ಪ್ರೊ.ಸಕ್ಸಾಲ್ ಹೂವಣ್ಣ, ಡಾ.ರೋಹಿಣೆ ಭೂಸನೂರಮಠ, ಡಾ.ಅಕ್ಷಯ ಯಾರ್ಡಿ, ಡಾ.ಪ್ರಜಾಪತಿ, ಡಾ.ಭಾಗ್ಯಶ್ರೀ ದೊಡ್ಡಮನಿ, ಡಾ.ಸರೋಜಾ ಸಂತಿ, ಡಾ.ಶಶಿಕಲಾ ರಾಠೋಡ, ಡಾ. ರಜಿಯಾ ನದಾಫ, ಡಾ. ಜಕ್ಕವ್ವಾ ವಠಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

Download Eedina App Android / iOS

X