ಟ್ರಂಪ್ ಸುಂಕ ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಭಾರತ

Date:

Advertisements

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡುವ ವಸ್ತುಗಳ ಮೇಲೆ ಹೆಚ್ಚುವರಿ ಸುಂಕವನ್ನು ವಿಧಿಸಿದ ಬೆನ್ನಲ್ಲೇ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಭಾರತ ನಿರ್ಧಿರಿಸಿದೆ. ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ ಎಂದು ಅಂಚೆ ಇಲಾಖೆ ಪ್ರಕಟಿಸಿದೆ.

“ಆಗಸ್ಟ್ 25ರಿಂದ ಜಾರಿಗೆ ಬರುವಂತೆ ಅಮೆರಿಕಕ್ಕೆ ಕಳುಹಿಸಲಾಗುವ ಎಲ್ಲಾ ರೀತಿಯ ಅಂಚೆ ವಸ್ತುಗಳ ಬುಕಿಂಗ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಅಂಚೆ ಇಲಾಖೆ ನಿರ್ಧರಿಸಿದೆ. ಪತ್ರಗಳು/ದಾಖಲೆಗಳು ಮತ್ತು 100 ಡಾಲರ್ ಮೌಲ್ಯದ ಉಡುಗೊರೆ ವಸ್ತುಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಸ್ಥಗಿತಗೊಳಿಸಲಾಗುತ್ತದೆ” ಎಂದು ಸರ್ಕಾರಿ ಅಧಿಸೂಚನೆ ತಿಳಿಸಿದೆ.

ಇದನ್ನು ಓದಿದ್ದೀರಾ? ಭಾರತದ ಮೇಲೆ ಅಮೆರಿಕ ಸುಂಕಾಸ್ತ್ರ; ಆಪ್ತಮಿತ್ರನಿಗೆ 26% ಸುಂಕ ವಿಧಿಸಿದ ಟ್ರಂಪ್‌

Advertisements

“800 ಡಾಲರ್‌ವರೆಗಿನ ಸರಕುಗಳಿಗೆ ಸುಂಕ-ಮುಕ್ತ ಡಿ ಮಿನಿಮಿಸ್ ವಿನಾಯಿತಿಯನ್ನು ಆಗಸ್ಟ್ 29ರಿಂದ ಜಾರಿಗೆ ಬರುವಂತೆ ಹಿಂತೆಗೆದುಕೊಳ್ಳಲಾಗುವುದು” ಎಂಬ ಅಮೆರಿಕದ ಕಾರ್ಯನಿರ್ವಾಹಕ ಆದೇಶದ ಬೆನ್ನಲ್ಲೇ ಭಾರತೀಯ ಅಂಚೆ ಇಲಾಖೆ ಅಮೆರಿಕಕ್ಕೆ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಆದೇಶ ಹೊರಡಿಸಿದೆ.

“ಅಮೆರಿಕಕ್ಕೆ ಕಳುಹಿಸಲಾಗುವ ಎಲ್ಲಾ ಅಂತಾರಾಷ್ಟ್ರೀಯ ಅಂಚೆ ವಸ್ತುಗಳು, ಅವುಗಳ ಮೌಲ್ಯವನ್ನು ಲೆಕ್ಕಿಸದೆ, ದೇಶ-ನಿರ್ದಿಷ್ಟ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಶಕ್ತಿ ಕಾಯ್ದೆ (IEEPA) ಸುಂಕ ಚೌಕಟ್ಟಿನ ಪ್ರಕಾರ ಕಸ್ಟಮ್ಸ್ ಸುಂಕಗಳಿಗೆ ಒಳಪಟ್ಟಿರುತ್ತವೆ. ಆದಾಗ್ಯೂ, $100 ಮೌಲ್ಯದವರೆಗಿನ ಉಡುಗೊರೆ ವಸ್ತುಗಳು ಸುಂಕದಿಂದ ವಿನಾಯಿತಿ ಪಡೆಯುತ್ತವೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | 10 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ಸಾಕ್ಷಿ ದೂರುದಾರ

ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ...

ಗಾಝಾದಲ್ಲಿ ವಿದೇಶಿ ಮಾಧ್ಯಮ ಪ್ರವೇಶ ನಿರ್ಬಂಧ ತೆರವುಗೊಳಿಸಿ: ಇಸ್ರೇಲ್‌ಗೆ 27 ದೇಶಗಳ ಒಕ್ಕೂಟ ಆಗ್ರಹ

ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ ಸರ್ಕಾರವು ವಿಧಿಸಿರುವ ವಿದೇಶಿ ಪತ್ರಕರ್ತರ ನಿರ್ಬಂಧವನ್ನು ತೆಗೆದುಹಾಕಿ...

ತಾಂತ್ರಿಕ ದೋಷ: ಮತ್ತೊಂದು ಏರ್‌ ಇಂಡಿಯಾ ವಿಮಾನ ರದ್ದು, ವಾರದಲ್ಲೇ ಮೂರನೇ ಘಟನೆ

110 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮುಂಬೈನಿಂದ ಜೋಧ್‌ಪುರಕ್ಕೆ ಹಾರುತ್ತಿದ್ದ ಏರ್‌ ಇಂಡಿಯಾ ವಿಮಾನವನ್ನು...

ಧರ್ಮಸ್ಥಳ ಪ್ರಕರಣ | ಎಸ್‌ಐಟಿಯನ್ನು ಸರ್ಕಾರ ರಚಿಸಿದ್ದು ಸತ್ಯ ಹೊರತರಲು : ಗೃಹ ಸಚಿವ ಪರಮೇಶ್ವರ್

"ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿದ್ದೇನೆ ಎಂದಿದ್ದ ವ್ಯಕ್ತಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ....

Download Eedina App Android / iOS

X