ಬೆಂಗಳೂರು ರಿಂಗ್ ರಸ್ತೆ ಭೂ ಸ್ವಾಧೀನ ಕೈಬಿಡಲು ಸಿದ್ದಗಂಗಾ ಶ್ರೀ ಒತ್ತಾಯ

Date:

Advertisements

ಬೆಂಗಳೂರು ರಿಂಗ್ ರಸ್ತೆಯ (ಬಿಆರ್ ಆರ್) ಭೂ ಸ್ವಾಧೀನವನ್ನು ಕೈ ಬಿಡುವಂತೆ ಸಿದ್ದಗಂಗಾ ಮಠಾಧೀಶರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಕೇಂದ್ರ ಸಚಿವ ಸೋಮಣ್ಣ ಅವರ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.


ಶನಿವಾರ ಸಿದ್ದಗಂಗಾ ಮಠದಲ್ಲಿ ನೂರಾರು ರೈತರ ಸಮ್ಮುಖದಲ್ಲಿ ಅವರು ರೈತರು ನೀಡಿದ ಈ ಒತ್ತಾಯದ ಮನವಿ ಪತ್ರವನ್ನು ಕೇಂದ್ರ ಸಚಿವರಿಗೆ ಸಲ್ಲಿಸಿದರು. ಭಾರತ ಮಾಲಾ ಯೋಜನೆಯಲ್ಲಿ ಈ ರಸ್ತೆಗಾಗಿ 2019ರಲ್ಲಿ ಭೂ ಸ್ವಾಧೀನದ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಕನಪುರ- ಅನೇಕಲ್, ರಾಮನಗರ-ಮಾಗಡಿ-ಶಿವಗಂಗೆ ಮಾರ್ಗವಾಗಿ ದಾಬಸಪೇಟೆ ಗೆ ಸೇರುವ ಬೆಂಗಳೂರು ರಿಂಗ್ ರಸ್ತೆಗೆ (ಬಿಆರ್ ಆರ್) ಈಗಾಗಲೇ ಭೂ ಸ್ವಾಧೀನವನ್ನು ಮಾಡಿಕೊಳ್ಳಲಾಗಿದೆ. ಕೆಲವೇ ಮಂದಿಗೆ ಮಾತ್ರ ಪರಿಹಾರ ನೀಡಿ ಉಳಿದ ರೈತರಿಗೆ ಪರಿಹಾರವನ್ನು ನೀಡಿಲ್ಲ. ಅಧಿಕಾರಿಗಳು ಯೋಜನೆಯನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ನಿಲ್ಲಿಸಿದೆ. ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದಾರೆ. ರೈತರಿಗೆ ಭೂಮಿಯೂ ಇಲ್ಲ, ಪರಿಹಾರವೂ ಇಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರ, ಪರಿಹಾರ ಕೊಡಬೇಕು ಇಲ್ಲವೇ ರೈತರಿಗೆ ಭೂಮಿಯನ್ನಾದರೂ ವಾಪಸ್ ನೀಡಲಿ. ಈ ಬಗ್ಗೆ ಕೇಂದ್ರ ಸರ್ಕಾರದಲ್ಲಿ ಮಾತನಾಡಬೇಕು ಎಂದರು.

Advertisements

ಶಿವಗಂಗೆಯ ಹೊನ್ನಮ್ಮಗವಿ ಮಠದ ಶ್ರೀಗಳಾದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಭೂ ಸ್ವಾಧೀನದ ಹಣ ಬರಲಿದೆ ಎಂದು ಅನೇಕ ರೈತರು ಸಾಲ ಮಾಡಿ ಮನೆ ಕಟ್ಟಿದ್ದಾರೆ, ಮದುವೆ ಮಾಡಿದ್ದಾರೆ. ಸಾಲಕ್ಕೆ ಬಡ್ಡಿಕಟ್ಟಲು ಸಾಧ್ಯವಾಗದೇ ಪರದಾಡುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಯ ಭೂಮಿಯನ್ನ ಕೆಲವೇ ಲಕ್ಷ ನೀಡಿ ಸ್ವಾಧೀನದ ನೋಟಿಸ್ ನೀಡಿ ನಾಲ್ಕು ವರ್ಷ ಕಳೆಯುತ್ತಾ ಬಂದಿದೆ. ಪರಿಹಾರ ಬೇಡ, ಸ್ವಾಧೀನವನ್ನೇ ಕೈಬಿಡುವಂತೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.


ವಕೀಲ ಸಿ.ಕೆ. ಮಹೇಂದ್ರ ರೈತರ ನಿಯೋಗದ ನೇತೃತ್ವವಹಿಸಿದ್ದರು. ಅಧಿಕಾರಿಗಳು ಯೋಜನೆ ತಾತ್ಕಾಲಿಕವಾಗಿ ನಿಲ್ಲಿಸಿರುವುದಾಗಿ ಪತ್ರ ನೀಡಿದ್ದಾರೆ. ಹೀಗಾಗಿ ಭೂ ಸ್ವಾಧೀನ ರದ್ದುಗೊಳಿಸಬೇಕು. ಭಾರತ ಮಾಲಾ ಯೋಜನೆ ಕೂಡ ಬದಲಾಗಿರುವುದರಿಂದ ಜಾಗ ಬೇಕಿದ್ದರೆ ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮನವರಿಕೆ ಮಾಡಿಕೊಟ್ಟರೆ ರೈತರಿಗೂ ಹೆಚ್ಚು ಪರಿಹಾರ ಸಿಗಲಿದೆ, ಇಲ್ಲದಿದ್ದರೆ ಅನ್ಯಾಯವಾಗಲದೆ ಎಂದು ಸಚಿವರಿಗೆ ತಿಳಿಸಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಮುಂದೆ ಮುಖ ಇಟ್ಟು ಮಾತನಾಡದಂತೆ ಕರ್ನಾಟಕದ ಮಾರ್ಯದೆಯನ್ನು ಕಳೆಯಲಾಗಿದೆ ಎಂದು ಕೇಂದ್ರ ಸಚಿವ ಸೋಮಣ್ಣ ಬೇಸರ ವ್ಯಕ್ತಪಡಿಸಿದರು.

ಸಿದ್ದಗಂಗಾ ಶ್ರೀಗಳೊಂದಿಗೆ ತುಂಬಾ ಬೇಸರಿಕೊಂಡೇ ಮಾತನಾಡಿದ  ಸಚಿವರು, ರಾಜ್ಯದ ಹೆದ್ದಾರಿಗಳ ಇಂಚಿಂಚು ಮಾಹಿತಿ ಸಚಿವರಾಧ ಗಡ್ಕರಿಯವರ ಬಳಿ ಇದೆ. ಯಾವ ರೈತರ ಜಾಗ ಎಷ್ಟಿದೆ, ಮಧ್ಯವರ್ತಿಗಳು ಎಷ್ಟು ಜಾಗ ಖರೀದಿಸಿದ್ದಾರೆ ಎಂಬ ಎಲ್ಲಾ ಮಾಹಿತಿ ಅವರಲ್ಲಿದೆ. ಇಲ್ಲಿ ಮಧ್ಯವರ್ತಿಗಳು ರೈತರ ಭೂಮಿಯನ್ನು ಕೆಲವೇ ಲಕ್ಷ ನೀಡಿ ಪತ್ರ ಹಾಕಿಸಿಕೊಂಡಿರುತ್ತಾರೆ. ಖರೀದಿ ಮಾಡಿರುತ್ತಾರೆ. ಹೀಗಾಗಿಯೇ ಹೆದ್ದಾರಿಯ ಬಗ್ಗೆ ಮಾತನಾಡುವುದೆಂದರೆ ದಳ್ಳಾಳಿಗಳ ಪರ ಮಾತನಾಡಿದಂತೆ ಆಗುತ್ತದೆ. ಇದರಿಂದಾಗಿ ಅಲ್ಲಿ ಕರ್ನಾಟಕದವರು  ಮುಖಎತ್ತದಂತೆ ಆಗಿದೆ. ಆದರೂ ಶ್ರೀಗಳು ಹೇಳಿರುವುದರಿಂದ ಯೋಜನೆಯ ಬಗ್ಗೆ ಮಾತನಾಡಲು ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವೆ ಎಂದು ಹೇಳಿದರು


ಸಭೆಯಲ್ಲಿ ರೈತ ಮುಖಂಡರಾದ ಉಮೇಶ್ ಕಂಬಾಳು, ಕರಿಮಣ್ಣೆಯ ದೇವಕುಮಾರ್, ಡಾಬಸಪೇಟೆಯ ಗಟ್ಟಿಬೈರಪ್ಪ, ಶಿವಗಂಗೆಯ ಸುರೇಶ್, ಬೆಳಗುಂಬ ನಾಗೇಂದ್ರಕುಮಾರ್, ಪ್ರಕಾಶ್ ರಂಗೇನಹಳ್ಳಿ, ಗುಡೇಮಾರನಹಳ್ಳಿ ಶಿವರುದ್ರಪ್ಪ, ಗುರುಪ್ರಸಾದ್ ಡಾಬಸಪೇಟೆ, ರಮೇಶ್ ಡಾಬಸಪೇಟೆ, ಮಾಗಡಿಯ ಬೋರಯ್ಯ, ಬೀರಗೊಂಡನಹಳ್ಳಿ ನಾರಾಯಣ ಗೌಡ, ಬಿಡದಿಯ ಶ್ರೀಧರ್, ರಾಮನಗರ ಹೇಮಂತಕುಮಾರ್ ಇತರರು ಇದ್ದರು.




eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅತ್ತೆಯನ್ನು ಹತ್ಯೆಗೈದ ಸೊಸೆ

ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಸೊಸೆಯೇ ಅತ್ತೆಯನ್ನು ಹತ್ಯೆ ಮಾಡಿರುವ ಘಟನೆ...

ಧರ್ಮಸ್ಥಳ ಪ್ರಕರಣ | ಸೌಜನ್ಯ ಹೋರಾಟ ಮುಂದುವರಿಯಲಿದೆ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಕೋಲಾರ | ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಂತಾರಾಷ್ಟ್ರೀಯ ಅಧಿಕಾರಿಗಳು ಭೇಟಿ

ಕೋಲಾರ ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ...

ಹಾವೇರಿ | ಬೇಡ್ತಿ-ವರದಾ ನದಿ ಜೋಡಣೆಗೆ ಕೇಂದ್ರ ತಾತ್ವಿಕ ಒಪ್ಪಿಗೆ: ಸಂಸದ ಬಸವರಾಜ ಬೊಮ್ಮಾಯಿ

"ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ...

Download Eedina App Android / iOS

X