ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

Date:

Advertisements

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಆಪ್ತ ಸಮಾಲೋಚಕರಿಗೆ ಮೂರು ದಿನದವರೆಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದರು.

ಕಾರ್ಯಾಗಾರದಲ್ಲಿ ಬೆಂಗಳೂರು ಮಾನಸಿಕ ಆರೋಗ್ಯ ಸೌಧದ ಉಪನಿರ್ದೇಶಕ ಡಾ. ರಜನಿ.ಪಿ. ಮಾತನಾಡಿ, ರಾಜ್ಯದಲ್ಲಿ ಟೆಲಿ-ಮನಸ್ ಟೊಲ್ ಪ್ರೀ ಸಂಖ್ಯೆ 14416 ಮತ್ತು 1800-89-14416 ರ ಕಾರ್ಯಕ್ಷಮತೆಯ ಬಗ್ಗೆ ಮತ್ತು ಆಪ್ತಸಮಾಲೋಚಕರ ಪಾತ್ರದ ಕುರಿತು ವಿವರಿಸಿದರು. ಬೆಂಗಳೂರು ಮನೋವ್ಯಕೀಯ ವಿಭಾಗ ಮತ್ತು ಪ್ರಿನ್ಸಿಪಲ್ ಇನ್‍ವೆಸ್ಟಿಗೇಟರ್ ಟೆಲಿ-ಮನಸ್‍ನ ಪ್ರಾಧ್ಯಾಪಕ ಡಾ. ನವೀನಕುಮಾರ ಸಿ. ಅವರು ಟೆಲಿ-ಮನಸ್ ಕಾರ್ಯಕ್ರಮದ ದೃಷ್ಟಿ, ಗುರಿ, ಉದ್ದೇಶ ಮತ್ತು ಪ್ರಾಮೂಖ್ಯತೆಯ ಬಗ್ಗೆ ತಿಳಿಸಿದರು.

ನಿಮ್ಹಾನ್ಸ್‌ನ ಮನೋವೈದ್ಯಕೀಯ ವಿಭಾಗ ಹೆಚ್ಚುವರಿ ಪ್ರಾಧ್ಯಾಪಕ ಡಾ. ಎನ್.ಮಂಜುನಾಥ ಮಾತನಾಡಿ, ಆಪ್ತಸಮಾಲೋಚನೆಯ ಕೌಶಲ್ಯಗಳನ್ನು ಬಲಪಡಿಸುವ ಕುರಿತು ಮತ್ತು ಮಾನಸಿಕ ಆರೋಗ್ಯ ಸೇವೆಗಳ ಕುರಿತು ತಿಳಿಸಿದರು. ಮೇಜರ್ ಸಿದ್ದಲಿಂಗಯ್ಯಾ ಹಿರೇಮಠ ಟೆಲಿ-ಮಾನಸ ಕಾರ್ಯಕ್ಷಮತೆಯ ಬಗ್ಗೆ ವಿವರಿಸಿದರು.

Advertisements

ಧಾರವಾಡ ಡಿಮ್ಹಾನ್ಸ್‍ನ ಮನೋವೈದ್ಯಕೀಯ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಹಾಗೂ ಕರ್ನಾಟಕ ಟೆಲಿ-ಮನಸ್-02 ಸೆಲ್ ನೋಡಲ್ ಅಧಿಕಾರಿ ಡಾ. ರಂಗನಾಥ ಕುಲಕರ್ಣಿ ಮಾತನಾಡಿ, ಟೆಲಿ-ಮನಸ್ ಸೆಲ್-02 ರಲ್ಲಿ ಕಳೆದ 2.5 ವರ್ಷಗಳಿಂದ ನಡೆದ ಕಾರ್ಯ ಚಟುವಟಿಕೆಗಳ ಬಗ್ಗೆ ಮತ್ತು ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಡಾ. ರಾಘವೇಂದ್ರ ನಾಯಕ, ನಿರ್ದೇಶಕ ಡಾ. ಅರಣಕುಮಾರ.ಸಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

Download Eedina App Android / iOS

X