ಕಳೆದ 24 ಗಂಟೆಗಳಲ್ಲಿ ಜಮ್ಮು ಕಾಶ್ಮೀರ ಮತ್ತು ತಮಿಳುನಾಡು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಕೆಲವು ದುರ್ಘಟನೆಗಳೂ ನಡೆದಿವೆ. ಮಳೆ ಸಂಬಂಧಿತ ಅವಘಡಗಳಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಜಾರ್ಖಂಡ್ನಲ್ಲಿ ಭಾರೀ ಮಳೆಗೆ ಐವರು ಸಾವನ್ನಪ್ಪಿದ್ದಾರೆ. ಜಮ್ಮು ಕಾಶ್ಮೀರ, ರಾಜಸ್ಥಾನದಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ ಒಬ್ಬ ವ್ಯಕ್ತಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಮತ್ತು ಉತ್ತರಾಖಂಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
