ಬೆಳಗಾವಿ | ಸಾರಿಗೆ ಬಸ್-ಮಿನಿ ಲಾರಿ ನಡುವೆ ಅಪಘಾತ; 20 ಕ್ಕೂ ಹೆಚ್ಚು ಮಂದಿಗೆ ಗಾಯ

Date:

Advertisements

ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲದಲ್ಲಿ ಇಂದು ನಡೆದಿದೆ.

ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಮಧ್ಯೆ ಈ ಘಟನೆ ಸಂಭವಿಸಿದೆ. ತಿಗಡಿ ಕಡೆಯಿಂದ ಬೈಲಹೊಂಗಲದ ಕಡೆಗೆ ಪ್ರಯಾಣಿಕರನ್ನು ಹೊತ್ತ ಸಾರಿಗೆ ಬಸ್ ಸಂಚರಿಸುತ್ತಿತ್ತು. ಇದೇ ಸಮಯಕ್ಕೆ ತಿಗಡಿ ಕ್ರಾಸ್ ಕಡೆಯಿಂದ ಎದುರಿಗೆ ಬಂದ ಇಟ್ಟಿಗೆ ತುಂಬಿದ್ದ ಮಿನಿ ಲಾರಿ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

Advertisements

ಈ ಅಪಘಾತದಲ್ಲಿ ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಇನ್ನೂ ಮಿನಿ ಲಾರಿಯೂ ಜಖಂ ಆಗಿದ್ದು, ಲಾರಿ ಚಾಲಕ ಸೇರಿದಂತೆ ಇನ್ನೂಳಿದವರಿಗೂ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣ ಹಾನಿ ಆಗಿಲ್ಲ.

ಈ ಅಪಘಾತದಿಂದ ಎರಡು ವಾಹನಗಳು ನಡುರಸ್ತೆಯಲ್ಲಿ ನಿಂತಿದ್ದರಿಂದ ಇನ್ನೂಳಿದ ವಾಹನ ಸವಾರರಿಗೂ ಸಂಚಾರಕ್ಕೆ ತೀವ್ರ ತೊಂದರೆ ಆಯಿತು. ಘಟನಾ ಸ್ಥಳಕ್ಕೆ ಬೈಲಹೊಂಗಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಬೆಳಗಾವಿ : ಲಕ್ಷ್ಮಣ ಸವದಿಯಿಂದ ನನ್ನ ಮೇಲೆ ಕೆಸ್ ನಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ : ಮಹೇಶ ಕುಮಠಳ್ಳಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ನಿರ್ದೇಶಕ ಹುದ್ದೆಗೆ ಸಂಬಂಧಿಸಿದ ಪ್ರಕರಣ ರದ್ದಾದರೆ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ...

Download Eedina App Android / iOS

X