ಬೆಳಗಾವಿ : ಬಸ್ ಲಾರಿ ಡಿಕ್ಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Date:

Advertisements

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸಾರಿಗೆ ಸಂಸ್ಥೆಯ ಬಸ್ ಹಾಗೂ ಮಿನಿ ಲಾರಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ತಿಗಡಿ ಕಡೆಯಿಂದ ಬೈಲಹೊಂಗಲದತ್ತ ಪ್ರಯಾಣಿಕರನ್ನು ಹೊತ್ತ ಸಾರಿಗೆ ಬಸ್ ಬರುತ್ತಿದ್ದ ವೇಳೆ, ಎದುರು ದಿಕ್ಕಿನಿಂದ ಇಟ್ಟಿಗೆ ತುಂಬಿಕೊಂಡು ಬರುತ್ತಿದ್ದ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ಹಾಗೂ ಲಾರಿ ಚಾಲಕ ಸೇರಿದಂತೆ ಕೆಲವರು ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬಸ್ ಹಾಗೂ ಲಾರಿ ಎರಡೂ ರಸ್ತೆ ಮಧ್ಯೆ ನಿಂತಿದ್ದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು.

Advertisements

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಬೈಲಹೊಂಗಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

ಬೆಳಗಾವಿ : ಲಕ್ಷ್ಮಣ ಸವದಿಯಿಂದ ನನ್ನ ಮೇಲೆ ಕೆಸ್ ನಾನು ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವೆ : ಮಹೇಶ ಕುಮಠಳ್ಳಿ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗದಲ್ಲಿ ನಿರ್ದೇಶಕ ಹುದ್ದೆಗೆ ಸಂಬಂಧಿಸಿದ ಪ್ರಕರಣ ರದ್ದಾದರೆ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಬೆಳಗಾವಿ : ವೇದಗಂಗಾ–ಘಟಪ್ರಭಾ ನದಿಗಳ ಅಬ್ಬರನಿಪ್ಪಾಣಿ – ಗೋಕಾಕ್ ಪ್ರದೇಶದಲ್ಲಿ ಪ್ರವಾಹದಿಂದ ಹಾನಿ

ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವೇದಗಂಗಾ ನದಿ ಉಕ್ಕಿ...

Download Eedina App Android / iOS

X