“ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ. ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೂ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಕೆರೆ ತುಂಬಿಸುವ ಯೋಜನೆಯಡಿ ಕೆರೆಗೆ ನೀರು ಹರಿಸುತ್ತಿದ್ದು, ಕೆರೆಯ ತೂಬುಗಳಲ್ಲಿ ಹೆಚ್ಚಿನ ನೀರು ಪೋಲಾಗುತ್ತಿದೆ. ಹೀಗಾದಲ್ಲಿ ಕೆರೆಗೆ ಎಷ್ಟು ನೀರು ಹರಿಸಿದರೂ ರೈತರು, ಸಾರ್ವಜನಿಕರಿಗೆ ಉಪಯೋಗ ಇಲ್ಲದೇ ವ್ಯರ್ಥವಾಗಲಿದ್ದು, ಕೂಡಲೇ ದುರಸ್ಥಿ ಕಾರ್ಯ ಕೈಗೊಳ್ಳಬೇಕು” ಎಂದು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತಸಂಘದ ಮುಖಂಡ ಕುಮಾರ್ ಭರಮಸಮುದ್ರ ಒತ್ತಾಯಿಸಿದರು.

ಈ ಬಗ್ಗೆ ಮಾಹಿತಿ ನೀಡಿದ “ಅವರು ಹಲವು ದಿನಗಳಿಂದ ಕೆರೆ ತೂಬಿನಲ್ಲಿ ಬಿರುಕುಂಟಾಗಿ ನೀರು ಸೋರಿ ಹೋಗುತ್ತಿದೆ. ಇದನ್ನು ಅಧಿಕಾರಿಗಳ ಗಮನಕ್ಕೆ ತಂದರೂ, ಅರ್ಧಂಬರ್ಧ ಕೆಲಸ ಮಾಡಿ ಹೋದಂತಹ ಅಧಿಕಾರಿಗಳು ಕೆರೆಯ ಕಡೆ ನೋಡದೆ ಮತ್ತೆ ತೂಬುಗಳಲ್ಲಿ ಹೆಚ್ಚಿನ ನೀರು ಪೋಲಾಗುತ್ತಿದೆ. ಕೆರೆಗಳಿಗೆ ಜಗಳೂರು 57 ಕೆರೆ ತುಂಬಿಸುವ ಯೋಜನೆಯಡಿ ನೀರು ಬಿಟ್ಟಿದ್ದು, ಮತ್ತೊಂದು ಕಡೆ ಈ ವರ್ಷ ಉತ್ತಮ ಮಳೆ ಆಗುತ್ತಿದ್ದು, ಮತ್ತೆ ಕೆರೆ ಕೋಡಿ ಬಿದ್ದಿದೆ. ಇದರಿಂದಾಗಿ ರೈತರಿಗೆ ಆತಂಕ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಕೆರೆಯ ಟ್ಯೂಬ್ಗಳಿಂದ ನೀರು ಪೋಲಾಗುತ್ತಿರುವುದನ್ನು ನಿಲ್ಲಿಸಬೇಕು. ಒಂದು ವೇಳೆ ಏನಾದರೂ ನಿರ್ಲಕ್ಷ್ಯ ಮಾಡಿದಲ್ಲಿ, ಅನಾಹುತಗಳು ಸಂಭವಿಸಿದಲ್ಲಿ ಮುಂದಿನ ದಿನದಲ್ಲಿ ಸಂಬಂಧಪಟ್ಟ ಕಚೇರಿಗಳಿಗೆ ಬೀಗ ಹಾಕುವುದರ ಮುಖಾಂತರ ಬೃಹತ್ ಹೋರಾಟ ನಡೆಸಲಾಗುವುದು” ಎಂದು ಎಚ್ಚರಿಸಿದರು.
ಈ ಸುದ್ದಿ ಓದಿದ್ದೀರಾ ? ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ
ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಡಾ ವಾಸುದೇವ ಮೇಟಿ ಬಣ ) ಜಗಳೂರು ತಾಲೂಕಿನ ಮುಖಂಡರು ಕಾರ್ಯಕರ್ತರು ರೈತರು ಹಾಜರಿದ್ದರು.