ಈ ಬಾರಿಯ ಗಣೇಶ ಹಬ್ಬಕ್ಕೆ ಪಿ.ಒ.ಪಿ ಗಣೇಶ ಮೂರ್ತಿ ಹಾಗೂ ಡಿ.ಜೆ. ಬಳಕೆಗೆ ಉತ್ತರ ಕನ್ನಡ ಜಿಲ್ಲೆಯ ಪರಿಸರ ಅಧಿಕಾರಿಗಳು ನಿಷೇಧ ಹೇರಿದ್ದಾರೆ.
ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ನಿಟ್ಟಿನಲ್ಲಿ ಸಾರ್ವಜನಿಕರು, ಗಣೇಶನ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ / ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವಂತೆ ಹಾಗೂ ಡಿ. ಜೆ. ಯನ್ನು ಬಳಸದಂತೆ ಜಿಲ್ಲಾ ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ.
ಉಚ್ಚ ನ್ಯಾಯಾಲಯದ ಆದೇಶ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ತಿಳಿಸಿರುವಂತೆ ಸದರಿ ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ಮೂರ್ತಿಗಳನ್ನು ಇನ್ನು ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಬಳಸುವ ಧ್ವನಿವರ್ಧಕಗಳಿಂದ (DJ, Loud speaker, Mike etc) ಹೊರಸೂಸುವ ಶಬ್ಧಮಾಲಿನ್ಯದಿಂದ ಚಿಕ್ಕ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದoತೆ ಶಬ್ಧಮಾಲಿನ್ಯವನ್ನು ತಡೆಗಟ್ಟಲು Noise Pollution (Regulation and Control) Rules, 2000 ರಲ್ಲಿನ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಯಾವುದೇ ತರಹದ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸಬೇಕು. ಉತ್ಸವ ಆಚರಿಸಲು ಬೇಕಾದ ಪೂರ್ವ ತಯಾರಿಗೆ ಸಂಬoಧಿಸಿದoತೆ, ಸ್ಥಳೀಯ ಸಂಸ್ಥೆಗಳಿoದ ಅನುಮೋದನೆ ಪಡೆಯುವುದು ನಿಯಮಾನುಸಾರ ಧ್ವನಿವರ್ಧಕಗಳನ್ನು ಬಳಸಲು ಇಲಾಖೆಯಿಂದ ಪೂರ್ವಾನುಮತಿ ಪಡೆಯಬೇಕು.
ಇದನ್ನೂ ಓದಿ: ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ
ಹಬ್ಬದ ಸಂದರ್ಭದಲ್ಲಿ ಸಿಡಿಸಲಾಗುವ ಪಟಾಕಿಯಿಂದ ಚಿಕ್ಕ ಮಕ್ಕಳಿಗೆ, ಪ್ರಾಣಿ ಪಕ್ಷಿಗಳಿಗೆ ತೊಂದರೆಯಾಗದoತೆ ತಡೆಯಲು ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಶಿಫಾರಸು ಮಾಡಿದ ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸುವಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟ ನಿರ್ದೇಶನಗಳನ್ನು ನೀಡಿರುತ್ತದೆ. ಹಸಿರು ಪಟಾಕಿಯ ಮೇಲೆ ಹಸಿರು ಬಣ್ಣದಲ್ಲಿ Council of Scientific & Industrial Research) & NEERI (National Environmental Engineering Research Institute)ಚಿಹ್ನೆ ಮತ್ತು ಕ್ಯೂಆರ್ ಕೋಡ್‌ಗಳನ್ನು ಮುದ್ರಿಸಿದ್ದು, ಅಂತಹ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ಇರುತ್ತದೆ.
ಸಾರ್ವಜನಿಕ ಹಿತದೃಷ್ಟಿಯಿಂದ ರಾತ್ರಿ 8 ಗಂಟೆಯಿoದ 10 ಗಂಟೆಯವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಸಿಡಿಸಬಹುದು. ರಾತ್ರಿ 10 ಗಂಟೆಯ ನಂತರ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ಪ್ರಕಟಣೆಯನ್ನು ಪರಿಸರ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊರಡಿಸಲಾಗಿದ್ದು, ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗಾಗಿ ಉತ್ತರ ಕನ್ನಡ ಜಿಲ್ಲೆಯ ನಾಗರಿಕರು ಸಹಕರಿಸಿ ಪರಿಸರ ಸ್ನೇಹಿ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸುವಂತೆ ಜಿಲ್ಲಾ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.