ಉತ್ತರ ಪ್ರದೇಶ | ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಎಂಟು ಸಾವು, 43 ಮಂದಿಗೆ ಗಾಯ

Date:

Advertisements

ಟ್ರ್ಯಾಕ್ಟರ್ ಟ್ರಾಲಿ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಸೇರಿ ಎಂಟು ಮಂದಿ ಯಾತ್ರಿಕರು ಸಾವನ್ನಪ್ಪಿರುವ, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮೃತರಲ್ಲಿ ಇಬ್ಬರು ಮಕ್ಕಳಾಗಿದ್ದು, ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರಲ್ಲಿ 12 ಮಂದಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಚಾಕುವಿನಿಂದ ಇರಿದು ಎಎನ್‌ಐ ಪತ್ರಕರ್ತನ ಕೊಲೆ

Advertisements

ಅರ್ನಿಯಾ ಬೈಪಾಸ್ ಬಳಿಯ ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಬೆಳಗಿನ ಜಾವ 2.10ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

“ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗೆ ಹೊರಟ ಯಾತ್ರಿಕರು ಇವರಾಗಿದ್ದು ಟ್ರಾಕ್ಟರ್ ಟ್ರಾಲಿಯಲ್ಲಿ 61 ಮಂದಿ ಇದ್ದರು. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಅವರು ವೆಂಟಿಲೇಟರ್ ಸಹಾಯದಲ್ಲಿದ್ದಾರೆ” ಎಂದು ಸಿಂಗ್ ವಿವರಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

ಲಿಂಗ ತಾರತಮ್ಯ | ಮಹಿಳೆಯರಿಗಿಂತ ಅಧಿಕ ವೇತನ ಪಡೆಯುತ್ತಾರೆ ಪುರುಷ ನರ್ಸ್‌ಗಳು: ಅಧ್ಯಯನ ವರದಿ

ನರ್ಸಿಂಗ್ ಅನ್ನು ಹೆಚ್ಚಾಗಿ ಮಹಿಳೆಯರ ವೃತ್ತಿ ಎಂಬಂತೆ ನೋಡಲಾಗುತ್ತದೆ. ಆದ್ದರಿಂದಾಗಿ ಪುರುಷರು...

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ...

ಜಾರ್ಖಂಡ್ | ಭೂಸ್ವಾಧೀನ ವಿವಾದ; ಮಾಜಿ ಸಿಎಂ ಚಂಪೈ ಸೊರೇನ್‌ ಗೃಹಬಂಧನ

ಜಾರ್ಖಂಡ್ ಸರ್ಕಾರದ ಬಹುಕೋಟಿ ವೆಚ್ಚದ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌...

Download Eedina App Android / iOS

X