ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

Date:

Advertisements

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ದಿನೇಶ್ ಅವರು ಕುಂದಾಪುರದಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ಮೂಲದವರಾದ ದಿನೇಶ್ ಮಂಗಳೂರು ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು(ಆಗಸ್ಟ್ 25) ಉಡುಪಿಯ ಕುಂದಾಪುರದಲ್ಲಿರುವ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ತಮಿಳು ನಟ ಮದನ್ ಬಾಬ್ ನಿಧನ

Advertisements

ವೀರ ಮದಕರಿ, ಮೂಕಜ್ಜಿಯ ಕನಸುಗಳು ಸಿನಿಮಾದಲ್ಲಿ ಕಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ದಿನೇಶ್ ಅವರು ಕೆಜಿಎಫ್‌ ಚಾಪ್ಟರ್ 1 ಮತ್ತು ಕೆಜಿಎಫ್‌ ಚಾಪ್ಟರ್ 2ರಲ್ಲಿ ನಟಿಸಿದ್ದಾರೆ.

ಹಾಗೆಯೇ ಉಳಿದವರು ಕಂಡಂತೆ, ರಣವಿಕ್ರಮ, ಕಿರಿಕ್ ಪಾರ್ಟಿ, 777 ಚಾರ್ಲಿ, ಆ ದಿನಗಳು, ರಿಕ್ಕಿ, ಕಿಚ್ಚ ಮೊದಲಾದ ಸಿನಿಮಾಗಳಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗ ಬಹು ಬೇಡಿಕೆಯ ಪೋಷಕ ನಟರುಗಳಲ್ಲಿ ದಿನೇಶ್ ಕೂಡಾ ಒಬ್ಬರು ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ಸಾಕ್ಷಿ ದೂರುದಾರನ ಬಂಧನ

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂಬ...

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ವಿಧಾನಸಭೆಯ ಮುಂಗಾರು ಅಧಿವೇಶನ ಮುಕ್ತಾಯ: ಒಟ್ಟು 39 ವಿಧೇಯಕ ಅಂಗೀಕಾರ

ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22)...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X