ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದ ದಾಳಿಯ ನಂತರ ಅವರಿಗೆ ನೀಡಲಾಗಿದ್ದ ಝಡ್ ಕೆಟಗರಿ ಸಿಆರ್‌ಪಿಎಫ್ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.
ಅವರ ಭದ್ರತೆಯನ್ನು ಮತ್ತೆ ದೆಹಲಿ ಪೊಲೀಸರಿಗೆ ವಹಿಸಲಾಗಿದೆ. 51 ವರ್ಷದ ಗುಪ್ತಾ ಅವರ ಮೇಲೆ ಆಗಸ್ಟ್ 20 ರಂದು ಬೆಳಿಗ್ಗೆ ಸಿವಿಲ್ ಲೈನ್ಸ್ ಪ್ರದೇಶದ ಅವರ ಕ್ಯಾಂಪ್ ಕಚೇರಿಯಲ್ಲಿ ನಡೆದ ಜನ ಸಂವಾದ ಕಾರ್ಯಕ್ರಮದ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಈ ಹಲ್ಲೆಯನ್ನು ಅವರನ್ನು ಕೊಲ್ಲಲು ಯೋಜಿತ ಪಿತೂರಿಯ ಭಾಗ ಎಂದು ಅವರ ಕಚೇರಿ ಹೇಳಿತ್ತು.
ಕೊಲೆ ಯತ್ನ ಆರೋಪಕ್ಕೆ ಸಂಬಂಧಿಸಿದಂತೆ ಗುಜರಾತ್ ನ ರಾಜ್‌ಕೋಟ್ ನಿವಾಸಿ ಸಕರಿಯಾ ರಾಜೇಶ್‌ಭಾಯಿ ಖಿಮ್ಮಿಭಾಯಿ (41) ಎಂಬುವವನನ್ನು ಬಂಧಿಸಿ, ಎಫ್‌ಐಆರ್ ದಾಖಲಿಸಿದ್ದರು.
ಒಂದು ದಿನದ ನಂತರ, ಕೇಂದ್ರ ಗೃಹ ಸಚಿವಾಲಯವು ಕೇಂದ್ರದ ಝಡ್ ಕೆಟಗರಿ ರಕ್ಷಣಾ ಪ್ರೋಟೋಕಾಲ್‌ನ ಭಾಗವಾಗಿ ಅವರಿಗೆ ತನ್ನ ರಕ್ಷಣೆಯನ್ನು ವಿಸ್ತರಿಸಲು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ವಿಐಪಿ ಭದ್ರತಾ ವಿಭಾಗವನ್ನು ಕೇಳಿದೆ.ಸಿಆರ್‌ಪಿಎಫ್ ರಕ್ಷಣೆಯನ್ನು ಹಿಂತೆಗೆದುಕೊಳ್ಳಲಾಗಿದೆ ಮತ್ತು ದೆಹಲಿ ಪೊಲೀಸರು ಈಗ ದೆಹಲಿ ಸಿಎಂಗೆ ಭದ್ರತೆಯನ್ನು ಒದಗಿಸುತ್ತಿದ್ದಾರೆ.