ಕಲಬುರಗಿ ನಗರದ ಕೆಎಸ್‌ಆರ್‌ಟಿಸಿ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕಲಬುರಗಿ ತಾಲೂಕಿನ ಮೈನಾಳ ಗ್ರಾಮದ ಮರೆಪ್ಪ ಕಟ್ಟಿಮನಿ (24) ಕೊಲೆಯಾದ ಯುವಕ. ಮೃತ ಯುವಕ ಚಾಲಕ ಕೆಲಸ ಮಾಡುತ್ತಿದ್ದನು, ಕೊಲೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.
ಈ ಕುರಿತು ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!