ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

Date:

Advertisements

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್​​​ನ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಆರ್​​ಎಸ್​ಎಸ್ ಗೀತೆ ಹಾಡಿರುವ ಬಗ್ಗೆ ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಬಿಜೆಪಿಯವರು ಡಿ ಕೆ ಶಿವಕುಮಾರ್‌ ನಡೆಯನ್ನು ಸಮರ್ಥಿಸಿಕೊಳ್ಳುತ್ತಾರೆ. ಹಾಗೆಂದು, ಅವರು ಉಪ ಮುಖ್ಯಮಂತ್ರಿಗಳಾಗಿ ಅದನ್ನು ಹಾಡಿದ್ದರೆ ತಕರಾರಿಲ್ಲ”ಎಂದರು.

“ಆರ್​ಎಸ್​​ಎಸ್ ಅನ್ನು ಈ ದೇಶದಲ್ಲಿ ಮೂರು ಬಾರಿ ಈಗಾಗಲೇ ನಿಷೇಧ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಡಿಸಿಎಂ ಆಗಿ ಸಂಘದ ಪ್ರಾರ್ಥನೆ ಮಾಡಿದರೆ ನಮ್ಮದೇನು ಅಭ್ಯಂತರವಿಲ್ಲ. ಯಾಕೆಂದರೆ ಸರ್ಕಾರ ಎಂಬುದು ಒಂದು ಪಕ್ಷದ್ದಲ್ಲ, ಇಡೀ ಏಳು ಕೋಟಿ ಕರ್ನಾಟಕ ಜನತೆಯ ಸರ್ಕಾರ. ಅದರಲ್ಲಿ ಆರ್​ಎಸ್​ಎಸ್​ನವರೂ ಇದ್ದಾರೆ, ಜಮಾಅತ್ ಇಸ್ಲಾಮಿ ಅವರೂ ಇದಾರೆ ಎಲ್ಲರೂ ಇದ್ದಾರೆ. ತಾಲಿಬಾನಿಗಳೂ ಇದ್ದಾರೆ” ವ್ಯಂಗ್ಯವಾಗಿ ಕುಟುಕಿದರು.

Advertisements

ಕಾಂಗ್ರೆಸ್ ಅಧ್ಯಕ್ಷರಾಗಿ ಆ ರೀತಿ ಹೇಳುವ ಹಾಗಿಲ್ಲ. ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಹೇಳಿದ್ದರೆ ಅವರು ಕ್ಷಮೆ ಕೇಳಬೇಕಾಗುತ್ತದೆ. ಯಾಕೆಂದರೆ, ಮಹಾತ್ಮ ಗಾಂಧಿಯವರನ್ನು ಕೊಂದಂತ ಸಂಘಟನೆ ಅದು. ಆ ಸಂಘಟನೆಯ ಪ್ರಾರ್ಥನೆ ಮಾಡುವುದು ಸರಿಯಲ್ಲ” ಎಂದು ಹೇಳಿದರು.

ಡಿ ಕೆ ಶಿವಕುಮಾರ್​​ಗೆ ಹಲವು ಮುಖ

“ಡಿ ಕೆ ಶಿವಕುಮಾರ್​​ಗೆ ಹಲವು ಮುಖಗಳಿವೆ. ಅವರು ಕೃಷಿಕರು ಎಂದು ಹೇಳಿಕೊಳ್ಳುತ್ತಾರೆ. ಆಮೇಲೆ ಒಮ್ಮೊಮ್ಮೆ ಕ್ವಾರಿ ಮಾಲೀಕ, ಎಜುಕೇಷನಿಸ್ಟ್, ಉದ್ಯಮಿ ಎಂದೆಲ್ಲ ಹೇಳಿಕೊಳ್ಳುತ್ತಾರೆ. ಹೀಗಾಗಿ ಯಾರಿಗೆ ಸಂದೇಶ ಕೊಡಬೇಕು ಎಂಬುದನ್ನು ಅವರು ಗಮನದಲ್ಲಿ ಇಟ್ಟುಕೊಂಡಿದ್ದಾರೆ ನಮಗೆ ಗೊತ್ತಿಲ್ಲ. ಯಾರನ್ನು ಮೆಚ್ಚಿಸುವುದಕ್ಕೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: ಸಂಸದ ಯದುವೀರ್ ಒಡೆಯರ್ ಸ್ವಾಗತ

ಕರ್ನಾಟಕದ ನಾಡಹಬ್ಬವೆಂದೇ ಪ್ರಸಿದ್ಧವಾಗಿರುವ ಮೈಸೂರು ದಸರಾ ಮಹೋತ್ಸವದ ಈ ಬಾರಿಯ ಉದ್ಘಾಟನೆಗೆ...

ಬಿಹಾರ ಸಿಎಂ ಅಭ್ಯರ್ಥಿ | ಮಹಾಘಟಬಂಧನ ನಿರ್ಧರಿಸಲಿದೆ; ಆರ್‌ಜೆಡಿಗೂ ಹಕ್ಕಿದೆ: ಎಸ್‌ಪಿ ನಾಯಕ

ಬಿಹಾರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ವಿರೋಧ ಪಕ್ಷಗಳ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪೋಸ್ಟ್; ಇಬ್ಬರ ಮೇಲೆ ಎಫ್‌ಐಆರ್‌

ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್...

Download Eedina App Android / iOS

X