‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

Date:

Advertisements

“ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ” ಎಂದು ಹೇಳುವ ಮೂಲಕ ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಟ್ರೋಲ್ ಆಗಿದ್ದಾರೆ. ಆಗಸ್ಟ್ 23ರಂದು ಹಿಮಾಚಲ ಪ್ರದೇಶದ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅನುರಾಗ್ ನೀಡಿದ ಹೇಳಿಕೆಯು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗೆ, ಟ್ರೋಲ್‌ಗೆ ಗುರಿಯಾಗಿದೆ.

ಸದ್ಯ ಅನುರಾಗ್ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, “ಮೊದಲ ಬಾಹ್ಯಾಕಾಶ ಯಾತ್ರಿಕ ಯಾರು? ನನ್ನ ಪ್ರಕಾರ ಅದು ಭಗವಾನ್ ಹನುಮಾನ್” ಎಂದು ಹೇಳುವುದು ವಿಡಿಯೋದಲ್ಲಿ ಕಾಣಬಹುದು. “ಈ ಹೇಳಿಕೆಯ ಪೂರ್ಣ ಶ್ರೇಯಸ್ಸು ನಮ್ಮ ಅಜೈವಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಸಲ್ಲಬೇಕು” ಎಂದು ಕೆಲವು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಇದನ್ನು ಓದಿದ್ದೀರಾ? ಬಾಹ್ಯಾಕಾಶಕ್ಕೆ ಹೋಗುವ ಮುನ್ನ ಜೈವಿಕವಲ್ಲದ ಪ್ರಧಾನಿ ಮಣಿಪುರಕ್ಕೆ ಹೋಗಲಿ: ಜೈರಾಮ್ ರಮೇಶ್

Advertisements

ಇನ್ನು ವಾಸ್ತವದಲ್ಲಿ ಮೊದಲ ಬಾಹ್ಯಾಕಾಶ ಯಾತ್ರಿಕರಾದ ಯೂರಿ ಗಗಾರಿನ್ ಎಂದು ಹಲವು ನೆಟ್ಟಿಗರು ಕಾಮೆಂಟ್‌ಗಳನ್ನು ಮಾಡಿದ್ದಾರೆ. “ಮಕ್ಕಳ ತಪ್ಪನ್ನು ತಿದ್ದುವ ಬದಲು ಆ ಕ್ಷುಲ್ಲಕ ನಗುವಿನೊಂದಿಗೆ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ ಎಂದು ನೀವು ಅವರಿಗೆ ಹೇಳಿದ್ದೀರಿ. ನಿಜವಾಗಿ ಯೂರಿ ಗಗಾರಿನ್ ಮೊದಲ ಬಾಹ್ಯಾಕಾಶ ಪ್ರಯಾಣಿಕ. ಮಕ್ಕಳ ಮುಗ್ಧ ಮನಸ್ಸಿನೊಂದಿಗೆ ಆಟವಾಡುವುದನ್ನು ನಿಲ್ಲಿಸಿ” ಎಂದು ತಿಳಿಸಿದ್ದಾರೆ.

“ಎಲ್ಲಾ ಮಕ್ಕಳು ತಪ್ಪು ಉತ್ತರಗಳನ್ನು ನೀಡುತ್ತಿದ್ದರು. ಬಾಹ್ಯಾಕಾಶಕ್ಕೆ ಪ್ರಯಾಣಿಸಿದ ಮೊದಲ ವ್ಯಕ್ತಿ ನೀಲ್ ಆರ್ಮ್‌ಸ್ಟ್ರಾಂಗ್ ಅಲ್ಲ, ಯೂರಿ ಗಗಾರಿನ್ (ಚಂದ್ರನಿಗೆ ಪ್ರಯಾಣಿಸಿದ ಮೊದಲ ವ್ಯಕ್ತಿ). ನಂಬಿಕೆ ಮತ್ತು ವಿಜ್ಞಾನವು ವಿಭಿನ್ನ ವಿಷಯಗಳು. ಮಕ್ಕಳು ಶಾಲೆಯಲ್ಲಿ ವಿಜ್ಞಾನವನ್ನು ಮತ್ತು ಮನೆಯಲ್ಲಿ ನಂಬಿಕೆಯನ್ನು ಕಲಿಯಲಿ” ಎಂದು ಅಭಿಪ್ರಾಯಿಸಿದ್ದಾರೆ.

ಇನ್ನೋರ್ವ ನೆಟ್ಟಿಗರು, “ವಿಜ್ಞಾನವು ಪುರಾಣವಲ್ಲ. ತರಗತಿಗಳಲ್ಲಿ ಯುವ ಮನಸ್ಸುಗಳನ್ನು ದಾರಿ ತಪ್ಪಿಸುವುದು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜ್ಞಾನ, ತರ್ಕ ಮತ್ತು ವೈಜ್ಞಾನಿಕ ಮನೋಭಾವಕ್ಕೆ ಅವಮಾನ” ಎಂದಿದ್ದಾರೆ. ಇನ್ನು ಹಲವು ಮೀಮ್ಸ್‌ಗಳು ಹರಿದಾಡುತ್ತಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂಗವಿಕಲರ ಕುರಿತು ಹಾಸ್ಯ: ಕ್ಷಮೆಯಾಚಿಸಲು ಕಾಮಿಡಿಯನ್‌ಗಳಿಗೆ ಸುಪ್ರೀಂ ಸೂಚನೆ

ನೀವು ಮಾತುಗಳನ್ನು ವಾಣಿಜ್ಯೀಕರಣಗೊಳಿಸುವಾಗ ಯಾವುದೇ ಒಂದು ಸಮುದಾಯದ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

Download Eedina App Android / iOS

X