ಬಳ್ಳಾರಿ | ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕತೆಗೆ ಹಿನ್ನೆಡೆ: ಎಐಡಿಎಸ್ಒ ಆಕ್ರೋಶ

Date:

Advertisements

ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಕುಂದುತ್ತಿದ್ದು, ಉತ್ತೀರ್ಣರಾದ ವಿದ್ಯಾರ್ಥಿಗಳ‌ ಸಂಖ್ಯೆ ಕಡಿಮೆಯಾಗುತ್ತಿದೆ. ಆದ್ದರಿಂದ, ಉಪನ್ಯಾಸಕರ ಕೊರತೆಯನ್ನು ಸರಿಪಡಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಹೋಗಲಾಡಿಸಬೇಕು ಎಂದು ಬಳ್ಳಾರಿ ಎಐಡಿಎಸ್ಒ ಆಗ್ರಹಿಸಿತು.

ಅಖಿಲ ಭಾರತ ಪ್ರಜಾಪ್ರಭುತ್ವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಸರಳದೇವಿ ಕಾಲೇಜಿನ ಎದುರು ಪ್ರತಿಭಟನೆ ನಡೆಸಿ ಈ ವೇಳೆ ರಾಜ್ಯಾದ್ಯಂತ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಿಲು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಮಾತನಾಡಿ, “ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಈವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ತರಗತಿಗಳು ಸರಿಯಾಗಿ ನಡೆಯದಿರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ” ಎಂದರು.

Advertisements

“ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ‘ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ’ವೆಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಎಲ್‌ಇಡಿ ಬೀದಿದೀಪ ಯೋಜನೆಗೆ ಎಚ್‌ಡಿಎಂಸಿ ಅನುಮೋದನೆ

ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷ ಕೆ ಈರಣ್ಣ, ಉಪಾಧ್ಯಕ್ಷೆ ಎಂ ಶಾಂತಿ ಮತ್ತು ಸದಸ್ಯರಾದ ಹೊನ್ನುರಸ್ವಾಮಿ, ಮಂಜು, ರಾಜ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಗಣೇಶನ ವೇಷಧರಿಸಿ ರಕ್ತದಾನದ ಜಾಗೃತಿ

ಮೈಸೂರು ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ರಾಮಸ್ವಾಮಿ ವೃತದಲ್ಲಿ ವಾಹನ...

ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್‌ಐಟಿ ಶೋಧ

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ...

ಉಡುಪಿ | ಕಾರ್ಕಳದಲ್ಲಿ ವ್ಯಕ್ತಿಯ ಕೊಲೆ, ಪೊಲೀಸರಿಂದ ‌ಪರಿಶೀಲನೆ

ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ಸೋಮವಾರ ತಡರಾತ್ರಿ...

ಶಿವಮೊಗ್ಗ | ಜಿಲ್ಲಾಧಿಕಾರಿಗಳಿಂದ, ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ಜಾಗೃತಿ ಅಭಿಯಾನದ ಪೋಸ್ಟರ್ ಬಿಡುಗಡೆ

ಶಿವಮೊಗ್ಗ ಸೋಲಿಡಾರಿಟಿ ಯೂತ್ ಮೂಮ್ಮೆಂಟ್ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು....

Download Eedina App Android / iOS

X