ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಮತ್ತು ಹಲವು ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದರ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ‘ಮನುವಾದಿಗಳ ವಿಷ ತಲೆಗೇರಿಸಿಕೊಂಡ ಬಿಜೆಪಿಗರು
ಮುಸ್ಲಿಮರ ಕಂಡರೆ ದ್ವೇಷಕಾರುವುದನ್ನು ಮೊದಲು ಬಿಡಬೇಕು’ ಎಂದು ಹೇಳಿದರು.
ಬೂಕರ್ ಪ್ರಶಸ್ತಿಯ ಮೂಲಕ ಕನ್ನಡ ನಾಡಿನ ಕಂಪನ್ನು ವಿಶ್ವದೆಲ್ಲೆಡೆ ಹಬ್ಬುವ ಕೆಲಸ ಮಾಡಿರುವ ಬಾನು ಮುಷ್ತಾಕ್ ಅವರನ್ನು ಈ ನಾಡಿನ ಪ್ರಜೆಗಳಾಗಿ ಬಿಜೆಪಿಗರು ಮುಕ್ತ ಮನಸ್ಸಿನಿಂದ ಒಪ್ಪಿಕೊಂಡು ಗೌರವಿಸಬೇಕಿತ್ತು. ಆದರೇ ಬಿಜೆಪಿಗರು ಆಕ್ಷೇಪ ವ್ಯಕ್ತಪಡಿಸಿರುವುದು ಅತ್ಯಂತ ಬೇಸರದ ಸಂಗತಿ. ಎಲ್ಲದರಲ್ಲೂ ಧರ್ಮ, ಜಾತಿಗಳ ನೋಡುವ ಕೆಟ್ಟ ಮನಸ್ಥಿತಿ ತೊಲಗಬೇಕಿದೆ. ಸಾಧಕರ ಬಗ್ಗೆ ಮಾತಾಡುವಾಗ ನಾಲಿಗೆ ಹರಿಬಿಡುವುದು, ಕೀಳು ಮಟ್ಟದ ರಾಜಕೀಯಕ್ಕೆ ಬಳಸುವುದು ಸೂಕ್ತವಲ್ಲ ಎಂದು ಅಭಿಪ್ರಾಯಪಟ್ಟರು.
ಬಿಜೆಪಿಗರಿಗೆ ಮುಸ್ಲಿಮರ ಹೆಸರು ಕಂಡರೆ ಸಾಕು, ಕಾರಣವಿಲ್ಲದೆಯೇ ದ್ವೇಷ ಮಾಡುವ ತಮ್ಮ ಕೆಟ್ಟ ನೀತಿಯನ್ನು ಮುಂದುವರೆಸಿದ್ದಾರೆ. ಇದನ್ನೇ ಚಾಳಿ ಮಾಡಿಕೊಂಡಿದ್ದಾರೆ. ನಾಡಿಗೆ ಹೆಮ್ಮೆ ತಂದಿರುವ ಬೂಕರ್ ಪ್ರಶಸ್ತಿ ಪುರಸ್ಕೃರಾದ ಭಾನು ಮುಷ್ತಾಕ್ ರನ್ನು ಮುಸ್ಲಿಮ್ ಎನ್ನುವ ಕಾರಣಕ್ಕೆ ದಿಕ್ಕರಿಸುವುದು ಸಮಂಜಸವಲ್ಲ ಎಂದು ಕಿಡಿಕಾರಿದರು.
ದಸರಾ ಎಂಬುದು ನಾಡಹಬ್ಬ ಎಂಬ ಸಣ್ಣ ಸಂಗತಿಯನ್ನು ಮರೆತು, ಸೀಮಿತ ಕಳೆದುಕೊಂಡಂತೆ ವರ್ತಿಸುತ್ತಿರುವ ಬಿಜೆಪಿಗರು ನಾಡು ನುಡಿಗೆ ಕೊಡುಗೆ ನೀಡಿದವರನ್ನು ಅವಮಾನಿಸುವ ಕೆಲಸವನ್ನು ಮೊದಲು ನಿಲ್ಲಿಸಲಿ. ಧರ್ಮವನ್ನು ರಾಜಕೀಯದಲ್ಲಿ ಬೆರೆಸಬಾರದೆಂಬ ಸಣ್ಣ ಅರಿವನ್ನು ಬಿಜೆಪಿಯೊಳಗೆ ಅಳಿದುಳಿದಿರುವ ಕೆಲವರಾದರೂ ವಿಚಾರವಂತರು ತಮ್ಮ ಪಕ್ಷದ ಮುಖಂಡರಿಗೆ ತಿಳಿಸಲಿ ಎಂದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ‘ಹಾರ್ಟಿ ಪಂಕ್ಚರ್’ ಹೊಸ ತಂತ್ರಜ್ಞಾನ ಗಿಡ ಮರಗಳ ಕೊರತೆ ನೀಗಿಸುತ್ತದೆ : ಸುರೇಶ್ ದೇಸಾಯಿ
ಭಾರತೀಯ ಜನಗಳಾದ ನಾವು ಐಕ್ಯತೆಯಿಂದ ಇರಬೇಕೆಂಬ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ವರ್ತಿಸುತ್ತಿರುವ ಬಿಜೆಪಿಗರು ತಮ್ಮ ಈ ಮುಸ್ಲಿಂ ದ್ವೇಷದ ಮನಸ್ಥಿತಿಯನ್ನು ಬದಿಗಿಟ್ಟು ಸಂವಿಧಾನದ ಆಶಯವನ್ನು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.