ಬಿಕ್ಲು ಶಿವ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಮಂಗಳವಾರ (ಆ.26) ಬಂಧಿಸಿದ್ದಾರೆ.
ಕೊಲೆಯಾದ ಬಳಿಕ ತಲೆಮರೆಸಿಕೊಂಡಿದ್ದ ಜಗದೀಶ್ ಅಲಿಯಾಸ್ ಜಗ್ಗನನ್ನು ದೆಹಲಿಯಲ್ಲಿ ಸಿಐಡಿ ಅಧಿಕಾರಿಗಳ ವಿಶೇಷ ತಂಡ ಬಂಧಿಸಿದ್ದಾರೆ. ಜಗದೀಶ್‌ನನ್ನು ಬಂಧಿಸಿ ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ವರದಿಯಾಗಿದೆ.
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಜಗದೀಶ್ ಅಲಿಯಾಸ್ ಜಗ್ಗನ ವಿರುದ್ಧ ಬ್ಲೂಕಾರ್ನರ್ ನೋಟಿಸ್ ಹೊರಡಿಸಿದರೂ ಆರೋಪಿ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪರಾರಿಯಾಗುತ್ತಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಜಗದೀಶ್ ದುಬೈನಿಂದ ಥಾಯ್ಲೆಂಡ್, ಬಳಿಕ ಇಂಡೋನೇಷ್ಯಾ ಹೀಗೆ ಕಳೆದ ಒಂದು ತಿಂಗಳಲ್ಲಿ ನಾಲ್ಕು ದೇಶ ಸ್ಥಳಾಂತರವಾಗಿರುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮತ್ತೂಮ್ಮೆ ಇಂಟರ್‌ಪೋಲ್ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಪಿಯನ್ನು ಆದಷ್ಟೇ ಬೇಗ ಬಂಧಿಸಿ ರಾಜ್ಯಕ್ಕೆ ಕರೆತರಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಲವೆಂಬ ಗಾಲಿಯಡಿ ಡಿ.ಕೆ.ಶಿ.; ಏಳುವರೇ, ಬೀಳುವರೇ?
ಪೊಲೀಸರ ಕಣ್ಣು ತಪ್ಪಿಸಿ ವಿದೇಶದಲ್ಲಿ ಜಗದೀಶ್ ಓಡಾಡುತ್ತಿದ್ದ. ಬೆಂಗಳೂರಿನ ಕೆಲವರು ಆತನ ಖಾತೆಗೆ ಹಣ ಜಮೆ ಮಾಡುತ್ತಿರುವುದು ಗೊತ್ತಾಗಿತ್ತು. ಈ ಹಣದಿಂದಲೇ ಆತ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪರಾರಿಯಾಗುತ್ತಿದ್ದ. ಆದರಿಂದ ಆತನ ಬ್ಯಾಂಕ್ ಖಾತೆ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದರು.
ಜು.15ರಂದು ಮಾರಕಾಸ್ತ್ರಗಳಿಂದ ಶಿವಪ್ರಕಾಶ್‌ನನ್ನು ಮನೆ ಬಳಿಯೇ ಬರ್ಬರವಾಗಿ ಹತ್ಯೆ ಮಾಡಿದ್ದರು. ಪ್ರಕರಣದಲ್ಲಿ ಜಗದೀಶ್ ಮತ್ತು ಶಾಸಕ ಭೈರತಿ ಬಸವರಾಜ್ ಸೇರಿ 6 ಮಂದಿ ವಿರುದ್ಧ ಭಾರತಿನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ಶಾಸಕ ಭೈರತಿ ಬಸವರಾಜ್ ಅವರನ್ನು 2 ಬಾರಿ ವಿಚಾರಣೆ ನಡೆಸಲಾಗಿತ್ತು. ಕೆ ಜಿ ಹಳ್ಳಿ ಎಸಿಪಿ ಪ್ರಕಾಶ್ ರಾಥೋಡ್ ನೇತೃತ್ವದಲ್ಲಿ ಈ ಪ್ರಕರಣದ 16 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಸಿಐಡಿಗೆ ಪ್ರಕರಣ ವರ್ಗಾವಣೆ ಮಾಡಲಾಗಿತ್ತು.