ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

Date:

Advertisements

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಸ್ವಾಗತಿಸಿರುವ ಸಿಪಿಐಎಂ, ಈ ಆಯ್ಕೆ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿದೆ.

ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಸಿಪಿಐಎಂ, “ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ನಾಡಿನ ಹಿರಿಯ ಸಾಹಿತಿ, ತಮ್ಮ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆಯುವ ಮೂಲಕ ಕನ್ನಡದ ಕೀರ್ತಿಯನ್ನು, ರಾಜ್ಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಿದ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ. ಮಾತ್ರವಲ್ಲ ಈ ಮೂಲಕ ಸರ್ಕಾರ ಸೂಕ್ತ ಗೌರವವನ್ನು ನೀಡಿದೆ” ಎಂದು ಸಿಪಿಐಎಂ ಹೇಳಿದೆ.

ಇದನ್ನು ಓದಿದ್ದೀರಾ? ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

Advertisements

“ವಿಶ್ವವಿಖ್ಯಾತ ಮೈಸೂರು ದಸರಾ ಕರ್ನಾಟಕದ ಸಾಂಸ್ಕೃತಿಕ ವಿದ್ಯಮಾನವೇ ಹೊರತು ಅದೊಂದು ಧಾರ್ಮಿಕ ಅಲ್ಲ. ಹಾಗಾಗಿ ವಿಶ್ವವಿಖ್ಯಾತ ಕರ್ನಾಟಕದ ಸಾಂಸ್ಕೃತಿಕ ಉತ್ಸವ ಮೈಸೂರು ದಸರಾವನ್ನು ಕನ್ನಡ ನಾಡಿನ ಸಾಹಿತ್ಯದ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದು ಅತ್ಯಂತ ಸಮಯೋಚಿತವಾಗಿದೆ. ಈ ಸಂದರ್ಭದಲ್ಲಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅಲ್ಲದೆ ಬೇರೆ ಯಾವುದೇ ಆಯ್ಕೆ ಸೂಕ್ತವಾಗುವುದಿಲ್ಲ. ಸರ್ಕಾರದ ಈ ನಿರ್ಧಾರವನ್ನು ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷ ಸಿಪಿಐಎಂ ಹಾಸನ ಜಿಲ್ಲಾ ಸಮಿತಿ ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತದೆ” ಎಂದಿದೆ.

“ಇದೇ ಸಂದರ್ಭದಲ್ಲಿ ಬಿಜೆಪಿಯ ಕೆಲ ಮುಖಂಡರು ಬಾನು ಅವರ ಆಯ್ಕೆಯ ವಿರುದ್ಧ ಮಾತನಾಡಿದ್ದಾರೆ. ದಸರಾವನ್ನು ರಾಜ್ಯ ಸರ್ಕಾರದ ಕೋಟ್ಯಾಂತರ ರೂಪಾಯಿಗಳ ಅನುದಾನದಲ್ಲಿ ಸಂಘಟಿಸಲಾಗುತ್ತದೆ. ಅಂದರೆ ಅದು ನೇರವಾಗಿ ಈ ರಾಜ್ಯದ ಜನತೆಯ ತೆರಿಗೆಯ ಹಣ. ಕರ್ನಾಟಕ ಯಾವುದೋ ಒಂದು ಧರ್ಮ ಅಥವಾ ಜಾತಿಗೆ ಸೇರಿಲ್ಲ. ರಾಷ್ಟ್ರ ಕವಿ ಕುವೆಂಪು ಅವರು ಹೇಳಿದಂತೆ ಇದು ಸರ್ವ ಜನಾಂಗದ ಶಾಂತಿಯ ತೋಟ. ರಾಜ ಪ್ರಭುತ್ವವನ್ನು ಕೊನೆಗಾಣಿಸಿ ನಾವಿಂದು ಭಾರತದ ಸಂವಿಧಾನದ ಅಡಿಯಲ್ಲಿ, ಅದರ ಆಶಯದಂತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಇದನ್ನು ಅರ್ಥ ಮಾಡಿಕೊಳ್ಳಲಾಗದ ಬಿಜೆಪಿ ನಾಯಕರು ರಾಜ್ಯದ ಸೌಹಾರ್ದತೆಗೆ ಕೊಳ್ಳಿ ಇಡಲು ಹುನ್ನಾರ ನಡೆಸಿದ್ದಾರೆ. ಇದನ್ನು ಸಿಪಿಐಎಂ ತೀರ್ವವಾಗಿ ಖಂಡಿಸುತ್ತದೆ” ಎಂದು ತಿಳಿಸಿದೆ.

“ಕನ್ನಡದ ಕಂಪು ಬಾನು ಮುಷ್ತಾಕ್ ಅವರ ಮೂಲಕ ಅಂತಾರಾಷ್ಟ್ರೀಯವಾಗಿ ಪಸರಿಸಿದಾಗ ಅವರು ಮುಸ್ಲಿಂ ಸಮುದಾಯವರು ಎಂಬ ಕಾರಣಕ್ಕಾಗಿ ಒಂದು ಅಭಿನಂದನೆಯನ್ನೂ ಸಲ್ಲಿಸದ ಇವರು ಭಾರತದ ಜಾತ್ಯಾತೀತ ಪರಂಪರೆಯ ವಿರೋಧಿಗಳು. ಬಿಜೆಪಿ ಆರಂಭದಿಂದಲೂ ತನ್ನ ಸಿದ್ದಾಂತವನ್ನೇ ಮಹಿಳಾ ವಿರೋಧಿಯಾಗಿ, ಅಲ್ಪಸಂಖ್ಯಾತ ವಿರೋಧಿಯಾಗಿ, ದಲಿತ ವಿರೋಧಿಯಾಗಿ ರೂಪಿಸಿಕೊಂಡು ಬಂದಿದೆ ಮತ್ತು ಅದರ ಆಧಾರದಲ್ಲೇ ಕೀಳು ರಾಜಕಾರಣ ಮಾಡುತ್ತಿದೆ. ಆದರೆ ರಾಜ್ಯದ ಜನತೆ ಇಂತಹ ಕೀಳು ರಾಜಕಾರಣಕ್ಕೆ ಎಂದಿಗೂ ಬೆಲೆಕೊಟ್ಟವರಲ್ಲಾ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

“ಎಲ್ಲರೂ ಜೊತೆ ಸೇರಿ ಸಂಭ್ರಮಿಸುವ ನಾಡ ಹಬ್ಬ ತನ್ನ ಸೌಹಾರ್ದ ಪರಂಪರೆಯನ್ನು ಮುಂದುವರೆಸಲಿ. ಇದೇ ದಸರಾವನ್ನು 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ಉದ್ಘಾಟಿಸಿದ್ದಾರೆ. ಆಗಲೂ ನಾಡಿನ ಜನ ಸಂಭ್ರಮಿಸಿದ್ದಾರೆ. ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡವುದನ್ನು ವಿರೋಧಿಸುವ ಮೂಲಕ ಬಿಜೆಪಿ ಮತ್ತು ಸಂಘಪರಿವಾರದ ಶಕ್ತಿಗಳು ನಿಜವಾಗಿಯೂ ರಾಜ್ಯ ಹಾಗೂ ಕನ್ನಡ ಭಾಷೆಯ ಸಾಂಸ್ಕೃತಿಕ ಪರಂಪರೆಯ ವಿರೋಧಿಗಳು ಎಂದು ನಿರೂಪಿಸುತ್ತಿದ್ದಾರೆ. ಸರ್ಕಾರ ಇಂತಹ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯ ವಿರೋಧಿಗಳಿಗೆ ಮಣಿಯಬಾರದು ಹಾಗೂ ಅಂತಹ ದುಷ್ಟಶಕ್ತಿಗಳನ್ನು ನಿಯಂತ್ರಿಸಬೇಕು” ಎಂದು ಸಿಪಿಐಎಂ ಆಗ್ರಹಿಸಿದೆ.

“ಹಾಸನದವರಾದ ಬಾನು ಮುಷ್ತಾಕ್ ಆರಂಭದಿಂದಲೂ ಸಮಾಜದಲ್ಲಿನ ಅನ್ಯಾಯ, ಶೋಷಣೆಗಳ ವಿರುದ್ಧ ನಿರಂತರವಾಗಿ ದನಿ ಎತ್ತಿದವರು ಮತ್ತು ಆ ಕುರಿತೇ ತಮ್ಮ ಉತ್ಕೃಷ್ಟ ಸಾಹಿತ್ಯವನ್ನು ಕನ್ನಡದಲ್ಲಿ ರಚಿಸಿದವರು. ಬಾನು ಮುಷ್ತಾಕ್ ಅವರ ಜೊತೆಗೆ ಪಕ್ಷ ನಿಲ್ಲುತ್ತದೆ” ಎಂದು ಹಾಸನ ಸಮಿತಿ ಭರವಸೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ಶಿವಮೊಗ್ಗ | ಪತ್ರಿಕಾ ವಿತರಕರ ಸಮ್ಮೇಳನ ಯಶಸ್ವಿಗೆ ಭಾಗಿಯಾಗಿ : ಎನ್. ಮಾಲತೇಶ್

ಶಿವಮೊಗ್ಗ, ಮೈಸೂರಿನಲ್ಲಿ ನಡೆಯುವ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ 5 ನೇ...

ಮೈಸೂರು | ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಅಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ...

ವಿಜಯಪುರ |‌ ಕುರುಬರಿಗೆ ಎಸ್‌ಟಿ ಮೀಸಲಾತಿ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಆಗ್ರಹ

ಕುರುಬರಿಗೆ ಎಸ್‌ಟಿ(ಪರಿಶಿಷ್ಟ ಪಂಗಡ) ಮೀಸಲಾತಿಯನ್ನು ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದೆ ನಿಂತು...

Download Eedina App Android / iOS

X