ಬೀದರ್‌ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Date:

Advertisements

ಬೀದರ್‌ ನಗರದ ಅಕ್ಕಮಹಾದೇವಿ ಪದವಿ ಮಹಿಳಾ ಮಹಾವಿದ್ಯಾಲಯದ ತೃತೀಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.

ಕಾಲೇಜು ಪ್ರಾಚಾರ್ಯೆ ಡಾ.ರಂಜನಾ ಪಾಟೀಲ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಸಕಾರಾತ್ಮಕವಾಗಿ ಯೋಚಿಸುವ ವ್ಯಕ್ತಿ ಮಾತ್ರ ಬದುಕಿನಲ್ಲಿ ನೆಮ್ಮದಿಯಿಂದ ಇರುತ್ತಾನೆ. ನಮ್ಮಲ್ಲಿರುವ ಜ್ಞಾನಬಲ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಯಶಸ್ಸಿಗೆ ಪ್ರಯತ್ನಿಸಬೇಕುʼ ಎಂದರು.

ʼಭಾರತೀಯ ಸಂಸ್ಕೃತಿಯಲ್ಲಿ ಅತಿಥಿಗಳಿಗೆ ಸ್ವಾಗತಿಸುವುದು ಹಾಗೂ ಬೀಳ್ಕೊಡುವ ಪದ್ಧತಿ ಇದೆ. ಅದರಂತೆ ಪ್ರಥಮ ವರ್ಷಕ್ಕೆ ಬಂದ ವಿದ್ಯಾರ್ಥಿನಿಯರಿಗೆ ಹಿರಿಯ ವಿದ್ಯಾರ್ಥಿಗಳು ಆತ್ಮೀಯವಾಗಿ ಸ್ವಾಗತಿಸುವ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ಸತತ ಅಧ್ಯಯನದಲ್ಲಿ ತೊಡಗಿಸಿಕೊಂಡು ಸಾರ್ಥಕ ಬದುಕು ರೂಪಿಸಿಕೊಳ್ಳಿʼ ಎಂದು ಸಲಹೆ ನೀಡಿದರು.

Advertisements

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಗಂಗಾಬಿಕೆ ಪಾಟೀಲ್‌ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಇಂದಿನ ಯುವಜನತೆ ಪುಸ್ತಕಕ್ಕೆ ಸೀಮಿತವಾಗದೆ, ಸಮಾಜದಲ್ಲಿನ ಓರೆಕೋರೆಗಳನ್ನು ಅರಿತುಕೊಳ್ಳಲು ಪ್ರಯತ್ನಿಸಬೇಕು. ಸಮಾಜದಲ್ಲಿ ಬರುವ ನಕರಾತ್ಮಕ ಯೋಚನೆಗಳಿಗೆ ಆದ್ಯತೆ ನೀಡದೆ ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕುʼ ಎಂದರು.

WhatsApp Image 2025 08 26 at 1.11.04 PM

ಕಂಪ್ಯೂಟರ್‌ ವಿಭಾಗದ ಮುಖ್ಯಸ್ಥ ಡಾ.ಶಶಿಕಾಂತ ಅವರು ಮಾತನಾಡಿ, ʼಆಧುನಿಕ ತಂತ್ರಜ್ಞಾನ ಯುಗದಲ್ಲಿ ಎಲ್ಲ ಕ್ಷೇತ್ರದಲ್ಲಿ ಹೆಚ್ಚು ಸ್ಪರ್ಧೆ ಇದೆ. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಗ್ರಂಥಾಲಯ ಪುಸ್ತಕ, ಕಂಪ್ಯೂಟರ್‌ಗಳ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಜ್ಞಾನ ಸಂಪಾದಿಸಬೇಕು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಕಲ್ಯಾಣ ಕರ್ನಾಟಕದಲ್ಲಿ 36 ಪಿಯು ಉಪನ್ಯಾಸಕರ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ!

ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ದೇವರಾಜ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ದೇಶಕ್ಕೆ ಬರಹಗಾರರ ಕೊಡುಗೆ ಅನನ್ಯ

ದೇಶದ ಸ್ವಾತಂತ್ರ್ಯಕ್ಕೆ ಸಾಹಿತಿ, ಬರಹಗಾರರ ಕೊಡುಗೆ ಅನನ್ಯವಾಗಿದೆ. ಲೇಖನಿ ಖಡ್ಗಕ್ಕಿಂತ ಹರಿತವಾದದ್ದು,...

ಮೈಸೂರು | ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನಾಚರಣೆ; ಮೀಲಾದ್ ಘೋಷಣಾ ಜಾಥಾ

ಮೈಸೂರು ನಗರದ ಅಶೋಕ ರಸ್ತೆಯಲ್ಲಿರುವ ಮೀಲಾದ್ ಪಾರ್ಕ್ ವೃತ್ತದಲ್ಲಿ 'ಸುನ್ನಿ ಯುವಜನ...

ಮೈಸೂರು | ಗಣೇಶನ ವೇಷಧರಿಸಿ ರಕ್ತದಾನದ ಜಾಗೃತಿ

ಮೈಸೂರು ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ರಾಮಸ್ವಾಮಿ ವೃತದಲ್ಲಿ ವಾಹನ...

ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್‌ಐಟಿ ಶೋಧ

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ...

Download Eedina App Android / iOS

X