ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

Date:

Advertisements

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ನಾವು ಈಗಾಗಲೇ ಸ್ಪಷ್ಟಪಡಿಸಿದ್ದೇವೆ. ತನಿಖೆ ಮತ್ತು ತನಿಖೆ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರದ ಅವಹೇಳನ ಮಾಡಬಾರದು. ಅಪಪ್ರಚಾರ ಮಾಡಬಾರದು ಎಂಬುದು ಬಿಜೆಪಿ ನಿಲುವು. ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ನಾವು ಹೇಳಿದ್ದು, ಉಪ ಮುಖ್ಯಮಂತ್ರಿಗಳೂ ಇದನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ವಿ.ಸುನಿಲ್‍ಕುಮಾರ್ ಹೇಳಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, “ಇದರ ಹಿಂದಿನ ಶಕ್ತಿಗಳನ್ನು ಎಸ್‍ಐಟಿ ಪತ್ತೆ ಹಚ್ಚುವ ವಿಶ್ವಾಸ ನಮಗಿದೆ. ಇದರಲ್ಲಿ ಒಬ್ಬ ಮುಸುಕುಧಾರಿಯಲ್ಲ; ಹತ್ತಾರು ಜನರು ಮುಸುಕುಧಾರಿಗಳಾಗಿ ಕೆಲಸ ಮಾಡಿದ್ದಾರೆಂದು ನಾನು ಸದನದಲ್ಲೂ ಹೇಳಿದ್ದೆ. ಸುಳ್ಳು ಸುದ್ದಿ ಹರಡಿಸಿದವರು ಯಾರು? ಪಿತೂರಿ ಮಾಡಿದ್ದು ಯಾರು? ಇವೆಲ್ಲವೂ ತನಿಖೆಯಿಂದ ಗೊತ್ತಾಗಬೇಕಿದೆ. ಆದಷ್ಟು ಬೇಗ, ತನಿಖೆಯಿಂದ ಇವೆಲ್ಲ ಹೊರಬರಲಿ” ಎಂದು ಆಗ್ರಹಿಸಿದರು.

ಬಾನು ಮುಷ್ತಾಕ್ ಬಗ್ಗೆ ತಕರಾರು ಇಲ್ಲ

Advertisements

“ನಾಡಹಬ್ಬ ದಸರಾವನ್ನು ನಾಡಿನ ಜನರು ಅತ್ಯಂತ ಶ್ರದ್ಧಾಭಕ್ತಿಯಿಂದ ಗೌರವಿಸುವ- ಪೂಜಿಸುವ ಒಂದು ಸಂಸ್ಕೃತಿ. ಇದರ ಉದ್ಘಾಟನೆ ಹೇಗಾಗಬೇಕೆಂದು ಒಂದು ಜವಾಬ್ದಾರಿಯುತ ಸರಕಾರ ಇವತ್ತು ತೀರ್ಮಾನ ಮಾಡಬೇಕು. ಇಸ್ಲಾಂನಲ್ಲಿ ವಿಗ್ರಹ ಪೂಜೆಗೆ ಅವಕಾಶ ಇದ್ದರೆ, ಅದನ್ನು ಬಾನು ಮುಷ್ತಾಕ್ ಅವರು ಒಪ್ಪಿಕೊಳ್ಳುವುದಾದರೆ ನಮ್ಮದೇನೂ ಅಭ್ಯಂತರ ಇಲ್ಲ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಜಾತಿ ಮತ್ತು ಉಪಜಾತಿಗಳ ಪಟ್ಟಿಗೆ ಸಂಬಂಧಿಸಿ 7 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದೆ. ಹಬ್ಬ, ಹರಿದಿನಗಳು ಇರುವ ಕಾರಣ, ಸರಕಾರಿ ರಜೆಗಳು ನಿರಂತರವಾಗಿ ಇರುವ ಕಾರಣಕ್ಕೆ ಈ 7 ದಿನಗಳ ಕಾಲಾವಕಾಶವನ್ನು ಇನ್ನಷ್ಟು ವಿಸ್ತರಿಸಲು ಮನವಿ ಮಾಡಿದ್ದೇವೆ” ಎಂದು ಹೇಳಿದರು.

“ಆಕ್ಷೇಪಣೆ ಸಲ್ಲಿಸಲು ಇನ್ನೂ ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶ ಕೊಡಲು ಬಿಜೆಪಿ ಕಡೆಯಿಂದ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿದ್ದೇವೆ. ಇಂದು ಪ್ರಮುಖರ ಸಭೆ ನಡೆಸಲಾಗಿದೆ. 1,400 ಜಾತಿ ಪಟ್ಟಿ ಅವಲೋಕಿಸಿದಾಗ ಯಥಾಪ್ರಕಾರ ಮುಸ್ಲಿಮರು ಮತ್ತು ಮುಸ್ಲಿಂ ಉಪ ಜಾತಿಗಳನ್ನು ಪಟ್ಟಿಯಲ್ಲಿ ಕೈಬಿಟ್ಟಿದ್ದಾರೆ. ಹಿಂದೆ ಜಯಪ್ರಕಾಶ್ ಹೆಗ್ಡೆಯವರು 90 ಜಾತಿಗಳು ಮುಸಲ್ಮಾನರಲ್ಲಿ ಇವೆ ಎಂದು ಪ್ರಕಟಿಸಿದ್ದರು. ಆಯೋಗವು 1,400 ಜಾತಿಗಳ ಪಟ್ಟಿ ಮಾಡುವಾಗ ಇದನ್ನು ಯಾಕೆ ಬಿಟ್ಟಿದೆ ಎಂಬುದು ಸ್ಪಷ್ಟವಾಗಿಲ್ಲ” ಎಂದರು.

“ಜಾತಿಯ ಪಟ್ಟಿ, ಮಾನದಂಡ ಬಳಕೆ ಮೊದಲಾದ ಹಲವು ರೀತಿಯ ಗೊಂದಲಗಳಿವೆ. ಅವು ಅಧ್ಯಕ್ಷರ ಪತ್ರಿಕಾ ಹೇಳಿಕೆ ಮೂಲಕ ಗೊತ್ತಾಗಿದೆ. ಮುಂದಿನ ವಾರ ಬಿಜೆಪಿ ನಿಯೋಗವು ಆಯೋಗಕ್ಕೆ ಭೇಟಿ ಕೊಡಲಿದೆ. ನಮಗಿರುವ ಅನುಮಾನಗಳು, ಸಮೀಕ್ಷೆ ಯಾವ ರೀತಿ ನಡೆಯಬೇಕೆಂಬ ಕುರಿತು ವಿವರಗಳನ್ನು ತಿಳಿಸಲು ಇಂದಿನ ಸಭೆಯು ತೀರ್ಮಾನ ಮಾಡಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಕ್ಷಿ ದೂರುದಾರನಿಗೆ ಆಶ್ರಯ: ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಎಸ್‌ಐಟಿ ಶೋಧ

ಸಾಕ್ಷಿ ದೂರುದಾರ ತಾನು ಉಜಿರೆಯಲ್ಲಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ...

ದಸರಾ ಉದ್ಘಾಟನೆಗೆ ಬಾನು ಯೋಗ್ಯ ಆಯ್ಕೆ; ಪ್ರಗತಿಪರರ ಮೆಚ್ಚುಗೆ

ಕನ್ನಡದ ಕಥಾಸಂಕಲನಕ್ಕೆ 2025ರ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿ ಪುರಸ್ಕೃತ...

ದಸರಾ | ಬಾನು ಮುಷ್ತಾಕ್‌ಗೆ ವಿರೋಧ; ಮಹಿಳಾ ವಿರೋಧಿಗಳ ಹಳಹಳಿಕೆ

ಕೆ ಎಸ್ ನಿಸಾರ್ ಅಹಮದ್ ಅವರು ನಾಡಹಬ್ಬ ಉದ್ಘಾಟನೆ ಮಾಡಿದಾಗ ಇವರೆಲ್ಲ...

Download Eedina App Android / iOS

X