ಶಿರಸಿ | 35 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿ ಕೊನೆಗೂ ಬಂಧನ

Date:

Advertisements

ಹಳೆಯ ಪ್ರಕರಣವೊಂದರಲ್ಲಿ ಸುಮಾರು 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೊಲೀಸರು ದೆಹಲಿಯಲ್ಲಿ ಪತ್ತೆ ಹಚ್ಚಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1990ರ ನವೆಂಬರ್ 29ರಂದು ಶಿರಸಿಯ ಐದು ರಸ್ತೆಯ ಬಳಿ ದಿನಕರ್ ನಾರಾಯಣ ಶೆಟ್ಟಿ ಎಂಬುವವರ ಮೇಲೆ ದೀಪಕ್ ವಿಠಲ್ ಭಂಡಾರಿ ಎಂಬಾತ ಹಲ್ಲೆ ಮಾಡಿ ಗಾಯಗೊಳಿಸಿದ್ದ. ಈ ಸಂಬಂಧ ನಾರಾಯಣ ನಾಗಪ್ಪ ಶೆಟ್ಟಿಯವರು ನೀಡಿದ ದೂರಿನ ಮೇರೆಗೆ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪ್ರಕರಣ ದಾಖಲಾದಾಗಿನಿಂದಲೂ ಆರೋಪಿ ದೀಪಕ್ ಭಂಡಾರಿ ನಾಪತ್ತೆಯಾಗಿದ್ದ. ಕಳೆದ 35 ವರ್ಷಗಳಿಂದ ಆತ ಪೊಲೀಸರಿಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಆರೋಪಿ ದೀಪಕ್ ಭಂಡಾರಿಗಾಗಿ ಹುಬ್ಬಳ್ಳಿ, ಮಂಗಳೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇಂತಹ ಕ್ಲಿಷ್ಟಕರ ಪ್ರಕರಣವನ್ನು ಭೇದಿಸಲು ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡಕ್ಕೆ ಆರೋಪಿಯು ಪ್ರಸ್ತುತ ನವದೆಹಲಿಯಲ್ಲಿ ವಾಸವಾಗಿದ್ದು, ದಾಂಡೇಲಿಗೆ ಬರುವ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ಕಾರ್ಯಪ್ರವೃತ್ತರಾದ ಪೊಲೀಸರು, 2025ರ ಆಗಸ್ಟ್‌ 28ರಂದು ದಾಂಡೇಲಿಯಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Advertisements

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕ ದೀಪನ್ ಎಂ ಎನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ ನಾಯ್ಕ, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಪೊಲೀಸ್ ವೃತ್ತ ನಿರೀಕ್ಷಕ ಶಶಿಕಾಂತ ವರ್ಮಾ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಸಬ್ ರಿಜಿಸ್ಟರ್ ಕಚೇರಿಯಿಂದ ʼಲಂಚ ಸ್ವೀಕರಿಸುವುದಿಲ್ಲʼವೆಂಬ ನಾಮಫಲಕ ನಾಪತ್ತೆ

ಶಿರಸಿ ನಗರ ಠಾಣೆಯ ಪಿಎಸ್‌ಐಗಳಾದ ನಾಗಪ್ಪ(ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನಾರಾಯಣ ಆರ್ ರಾಠೋಡ್(ತನಿಖೆ) ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹನುಮಂತ ಕಬಾಡಿ, ತುಕಾರಾಮ ಬಣಕಾರ, ರಾಮಯ್ಯ ಪೂಜಾರಿ, ಸದ್ದಾಂ ಹಸೇನ್, ಚನ್ನಬಸಪ್ಪ ಕ್ಯಾರಕಟ್ಟಿ, ಹನುಮಂತ ಮಾಕಾಪುರ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿಗಳಾದ ಉದಯ ಗುನಗಾ ಮತ್ತು ಬಬನ್ ಕದಂ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

ಉಡುಪಿ‌ | ಹುಡುಗಿಯ ವಿಚಾರಕ್ಕೆ ಜಗಳ, ಕೊಲೆಯಲ್ಲಿ ಅಂತ್ಯ, ಆರೋಪಿಯ ಬಂಧನ

ಉಡುಪಿ‌ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿಯಲ್ಲಿ ಮದ್ಯರಾತ್ರಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ವಿಜಯಪುರ ಬಿಸಿಎಂ ವಸತಿನಿಲಯಕ್ಕೆ ಅಧಿಕಾರಿಗಳ ಭೇಟಿ: ಸಮಸ್ಯೆ ಬಗೆಹರಿಸುವ ಭರವಸೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಬಿಸಿಎಂ ವಸತಿನಿಲಯಕ್ಕೆ ಉಪತಹಶೀಲ್ದಾರ್ ಎನ್...

ಹಾವೇರಿ | ಗಣೇಶ ಚತುರ್ಥಿ: ಪ್ರಾಣಿ ವಧೆ ಹಾಗೂ ಮೀನು-ಮಾಂಸ ಮಾರಾಟ ನಿಷೇಧ

"ಗಣೇಶ ಚತುರ್ಥಿ ಪ್ರಯುಕ್ತ ಆಗಸ್ಟ್ 27 ರಂದು ಬುಧವಾರ ಪ್ರಾಣಿ ವಧೆ...

Download Eedina App Android / iOS

X