ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್.ಎಚ್. ಅವರ ನೇತೃತ್ವದ ನಿಯೋಗವು ತಾಲೂಕು ಆರೋಗ್ಯಾಧಿಕಾರಿ ಡಾ. ವಿಘ್ನೇಶ್ವರ್ ರವರನ್ನು ಭೇಟಿ ಮಾಡಿ, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬೇಕೆಂದು ಆಗ್ರಹಿಸಿತು.
ನಿಯೋಗದಲ್ಲಿ ಎಸ್‌ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ ಹಾಗೂ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಶರೀಫ್ ವಳವೂರು ಉಪಸ್ಥಿತರಿದ್ದರು.
ಇದನ್ನು ಓದಿದ್ದೀರಾ? ಸೈಬರ್ ವಂಚನೆ | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ಸೆ.15ರವರೆಗೆ ರಾಜ್ಯಾದ್ಯಂತ ಜಾಗೃತಿ ಅಭಿಯಾನ
ನಿಯೋಗವು, ಕಳೆದ ತಿಂಗಳಿನಲ್ಲಿ ತಾಲೂಕು ಮುಖ್ಯ ವೈದ್ಯರಾದ ಡಾಕ್ಟರ್ ಪುಷ್ಪಲತಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಬಂಟ್ವಾಳ ತಾಲೂಕಿನ ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರಿ ಆಸ್ಪತ್ರೆಯ ಮೂಲಭೂತ ಸೌಕರ್ಯಗಳನ್ನು ಬಲಪಡಿಸುವುದು ಹಾಗೂ ವೈದ್ಯಕೀಯ ಸೇವೆ ನಿರಂತರವಾಗಿ ಲಭ್ಯವಾಗುವಂತೆ ಮಾಡುವ ತುರ್ತು ಅಗತ್ಯವನ್ನು ಅಧಿಕಾರಿಗಳ ಗಮನಕ್ಕೆ ತಂದಿತು.
