ವಿಜಯಪುರ-ಬಬಲೇಶ್ವರ ಆ.27ರಿಂದ ಎರಡು ಬಸ್ಸುಗಳ ಸೇವೆ ಪ್ರಾರಂಭ

Date:

Advertisements

ವಿಜಯಪುರ-ಬಬಲೇಶ್ವರ ಮತ್ತು ಬಬಲೇಶ್ವರ-ವಿಜಯಪುರ ನಡುವೆ ಆಗಸ್ಟ್ 27 ರಿಂದ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ.

ಒಂದು ಬಸ್ಸು ವಿಜಯಪುರ-ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೋಂದು ಬಸ್ಸು ಬಬಲೇಶ್ವರ- ಸಾರವಾಡ- ಖತಿಜಾಪುರ ಮಾರ್ಗವಾಗಿ ವಿಜಯಪುರಕ್ಕೆ ಸಂಚರಿಸಲಿದೆ. ಪ್ರತಿದಿನ ಎರಡೂ ಬಸ್ಸುಗಳು ತಲಾ ಎಂಟು ಬಾರಿ ಈ ಮಾರ್ಗದಲ್ಲಿ ಸಂಚಾರ ನಡೆಸಲಿವೆ.

Advertisements

ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತಮ್ಮ ಶಾಲೆ, ಕಾಲೇಜುಗಳು ಹಾಗೂ ದೈನದಿಂದ ಚಟುವಟಿಕೆಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯ ಬಸ್ಸುಗಳನ್ನು ನಿಲುಗಡೆ ಮಾಡಬೇಕೆಂದು ಸಚಿವರಿಗೆ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಬಾದಾಮಿ | ವಿದ್ಯಾರ್ಥಿಗಳು ಸಂವಿಧಾನವನ್ನು ಅರಿಯಬೇಕಾದ ಅಗತ್ಯವಿದೆ: ಪರಶುರಾಮ ಮಹಾರಾಜನವರ

ಈ ಬೇಡಿಕೆಗೆ ಸ್ಪಂದಿಸಿದ ಸಚಿವರು ತಕ್ಷಣ ಕ್ರಮ ಕೈಗೊಳ್ಳುವಂತೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ವಿಭಾಗೀಯ ಸಾರಿಗೆ ಅಧಿಕಾರಿಗಳು ಮಂಗಳವಾರದಿಂದಲೇ ನಗರ ಸಾರಿಗೆ ಬಸ್ ಸೇವೆ ಪ್ರಾರಂಭಿಸಿ ಆದೇಶ ಹೊರಡಿಸಿದ್ದಾರೆ.

ಈ ಮಾರ್ಗವಾಗಿ ಸಂಚರಿಸುವ ಇನ್ನುಳಿದ ಬಸ್ಸುಗಳನ್ನು ಸಾರವಾಡ ಗ್ರಾಮದಲ್ಲಿ ನಿಲುಗಡೆ ಮಾಡುವ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

ಗದಗ | ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ( ಕಭೀ) ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ...

Download Eedina App Android / iOS

X