ಭಾಲ್ಕಿ | ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಅರಿವು ಅಭಿಯಾನ

Date:

Advertisements

ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಇಲಾಖೆ ಹಾಗೂ ಜೈ ಕರ್ನಾಟಕ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ನಿಟ್ಟೂರು (ಬಿ) ಸಹಯೋಗದಲ್ಲಿ ಮಂಗಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು.

ನಿಟ್ಟೂರ(ಬಿ) ಗ್ರಾಮ ಪಂಚಾಯತಿ ಪಿಡಿಒ ರಾಜಕುಮಾರ್‌ ತಂಬಾಕೆ, ʼಮಾನಸಿಕ ಹಾಗೂ ದೈಹಿಕ ಆರೋಗ್ಯ ನಾಶಗೊಳಿಸುವ ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ದೂರವಿರಬೇಕು. ಎಲ್ಲರೂ ವ್ಯಸನದಿಂದ ಮುಕ್ತರಾಗುವಂತೆ ಅರಿವು ಮೂಡಿಸಿದರೆ ಮಾತ್ರ ಸರ್ಕಾರದ ಈ ಕಾರ್ಯಕ್ರಮ ಯಶಸ್ವಿಯಾಗುತ್ತದೆʼ ಎಂದು ಸಲಹೆ ನೀಡಿದರು.

ನಿವೃತ್ತ ಪ್ರಾಚಾರ್ಯ ಬಾಬುರಾವ್ ಮಾಳಗೆ ಅವರು ಮಾತನಾಡಿ, ʼಯುವಜನರು ಮದ್ಯವ್ಯಸನ, ಗುಟುಕಾ, ಬೀಡಿ, ಸಿಗರೇಟ್, ಗಾಂಜಾ ಸೇವನೆ ಮೊದಲಾದವುಗಳು ನಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಇದರಿಂದ ನಮ್ಮ ಕುಟುಂಬಸ್ಥರಿಗೂ ತೊಂದರೆಯಾಗುತ್ತದೆ. ವಿದ್ಯಾರ್ಥಿಗಳು ವ್ಯಸನದಿಂದ ಮುಕ್ತರಾಗಿ ಆರೋಗ್ಯ ಕಾಪಾಡಿಕೊಳ್ಳಬೇಕುʼ ಎಂದು ಕರೆ ನೀಡಿದರು.

Advertisements
WhatsApp Image 2025 08 26 at 6.54.08 PM 1

ಗ್ರಾಮ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಷಣ್ಮುಖ, ಸದಸ್ಯರಾದ ಮಲ್ಲಿಕಾರ್ಜುನ ಕರಂಜಿ, ಬಾಲಾಜಿ ಪಾಟೀಲ್, ನಿಟ್ಟೂರ್ ಪೊಲೀಸ್ ಹೊರವಲಯ ಠಾಣೆಯ ಎಎಸ್ಐ ಲಕ್ಷ್ಮಣ್ ರೆಡ್ಡಿ, ಪಂಚಾಯತ್ ಒಕ್ಕೂಟದ ಅಧ್ಯಕ್ಷೆ ಚಂದ್ರಕಲಾ ಹಣಮಂತರಾವ್‌, ಒಕ್ಕೂಟದ ಎಂಬಿಕೆ ಮಂಗಲಾ ಮಾಳಗೆ, ಶಾಲೆ ಮುಖ್ಯಗುರು ಪುಂಡಲಿಕರಾವ್ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಾಲೆಯ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದನ್ನೂ ಓದಿ : ಬೀದರ್‌ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

ಗುಬ್ಬಿ | ಕಾಡುಗೊಲ್ಲರು ಶ್ರೀ ಕೃಷ್ಣನ ಆರಾಧಕರಲ್ಲ : ಬಿ.ದೊಡ್ಡಯ್ಯ

ವಿಶಿಷ್ಟ ಆಚರಣೆ ಸಂಸ್ಕೃತಿಯಲ್ಲಿ ಬುಡಕಟ್ಟು ಎಂದು ಗುರುತಿಸಿಕೊಂಡ ಕಾಡು ಗೊಲ್ಲರು...

ತುಮಕೂರು | ನೂತನ ವಿದ್ಯಾರ್ಥಿನಿಲಯ ನಿರ್ಮಾಣ : ಸಚಿವರಿಂದ ಶಂಕುಸ್ಥಾಪನೆ

ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು...

Download Eedina App Android / iOS

X