ಶಿಕ್ಷಕ ವೀರಣ್ಣ ಮಡಿವಾಳರ ಅಮಾನತು ಆದೇಶ ರದ್ದು, ಸೇವೆಗೆ ಮರು ನಿಯುಕ್ತಿ

Date:

Advertisements

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ನಿಡಗುಂದಿಯ ಅಂಬೇಡ್ಕರ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳರ ಅವರ ಅಮಾನತು ಆದೇಶ ರದ್ದುಗೊಳಿಸಿರುವ ಶಿಕ್ಷಣ ಇಲಾಖೆ ಅವರನ್ನು ಮರಳಿ ಸೇವೆಗೆ ನಿಯುಕ್ತಿ ಮಾಡಿದೆ.

ಶಾಲೆಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ವೀರಣ್ಣ ತಮ್ಮ ಶಾಲೆಯಿಂದ ತಾಲ್ಲೂಕು ಶಿಕ್ಷಣಾಧಿಕಾರಿ (ಬಿ.ಇ.ಒ.) ಕಚೇರಿಯ ತನಕ ಅಂಬೇಡ್ಕರ್‌ ಫೋಟೋ ಹಿಡಿದು ಮೌನ ಪಾದಯತ್ರೆ ಮಾಡಿದ್ದರು. ನೀಡಗುಂದಿಯ ಶಾಲೆಯಲ್ಲಿ ಒಂದರಿಂದ ಏಳನೆಯ ತರಗತಿವರೆಗೂ ಮಕ್ಕಳು ಓದಿತ್ತಿದ್ದು, ಎರಡೇ ಕೋಣೆಗಳು ಇದ್ದವು. ಹೆಚ್ಚಿನ ಕೊಠಡಿಗಾಗಿ ವೀರಣ್ಣ ಮಡಿವಾಳರ ಆಗ್ರಹಿಸಿದ್ದರು.

ವೀರಣ್ಣ ಮಡಿವಾಳ ಅವರ ಪ್ರತಿಭಟನೆ ಕಂಡು ಸರ್ಕಾರಕ್ಕೆ ಮುಜುಗರ ಒಡ್ಡುವಂತಹುದೂ ಆಗಿದೆಯೆಂದು ಬಿ.ಇ.ಒ. ನೋಟಿಸ್ ನೀಡಿ ಜೂನ್‌ನಲ್ಲಿ ಅಮಾನತು ಮಾಡಿದ್ದರು.

Advertisements

ಮೂರು ತಿಂಗಳ ನಂತರ ಅವರ ಅಮಾನತು ಆದೇಶ ರದ್ದಾಗಿದೆ. ಮತ್ತೆ ಅವರನ್ನು ಸೇವೆಗೆ ಮರು ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಈಗ ಆದೇಶಿಸಿದೆ. ಅವರು ಹಿಂದಿದ್ದ ನೀಡಗುಂದಿಯ ಅಂಬೇಡ್ಕರ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಅವರನ್ನು ನಿಯುಕ್ತಿಗೊಳಿಸದೆ ರಾಯಭಾಗದ ಮಗದೊಂದು ಶಾಲೆಗೆ ನಿಯುಕ್ತಿಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿ ಕೆ ಶಿವಕುಮಾರ್

ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ...

Download Eedina App Android / iOS

X