ಅಸ್ತಿತ್ವಕ್ಕೆ ಬಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಅಧ್ಯಕ್ಷರಾಗಿ ಸಿಎಂ, 75 ಸದಸ್ಯರಿಗೆ ಅವಕಾಶ

Date:

Advertisements

ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಒಟ್ಟು 75 ಸದಸ್ಯರ ಬಲದ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ಬಂದಿದೆ.

ಬೆಂಗಳೂರನ್ನು ಐದು ನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ರಚನೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಸಿಎಂ ಡಿ.ಕೆ. ಶಿವಕುಮಾರ್ ಉಪಾಧ್ಯಕ್ಷರಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ 73 ಮಂದಿಯನ್ನು ಪದನಿಮಿತ್ತ ಸದಸ್ಯರಾಗಿ ನೇಮಕ ಮಾಡಲಾಗಿದೆ.‌

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರಾಗಿ ಬೆಂಗಳೂರಿನ ಮೂವರು ಸಂಸದರು, ಬೆಂಗಳೂರು ವ್ಯಾಪ್ತಿಯ ಶಾಸಕರುಗಳನ್ನು ನೇಮಿಸಲಾಗಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಐವರನ್ನು ರಾಜ್ಯಸಭಾ ಸದಸ್ಯರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. 11 ಮಂದಿ ವಿಧಾನ ಪರಿಷತ್ ಸದಸ್ಯರನ್ನೂ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಕೂಡ ಪದನಿಮಿತ್ತ ಸದಸ್ಯರಾಗಿದ್ದಾರೆ.

Advertisements

ಕೇಂದ್ರ ಸಚಿವರಾಗಿರುವ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಗೆ ಸದಸ್ಯರ ಪಟ್ಟಿಯಲ್ಲಿದ್ದಾರೆ. ಅಲ್ಲದೆ, ಸಚಿವರಾದ ರಾಮಲಿಂಗಾ ರೆಡ್ಡಿ, ಕೆ ಜೆ ಜಾರ್ಜ್, ಬೈರತಿ ಸುರೇಶ್, ಕೃಷ್ಣ ಬೈರೇಗೌಡ, ಜಮರ್ ಅಹ್ಮದ್ ಖಾನ್ ಕೂಡಾ ಪದನಿಮಿತ್ತ ಸದಸ್ಯರ ಪಟ್ಟಿಯಲ್ಲಿ ಇದ್ದಾರೆ.

ಐದು ನಗರ ಪಾಲಿಕೆಗಳಾದ ಬೆಂಗಳೂರು ಕೇಂದ್ರ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ಚಿಮ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ನಗರ ಪಾಲಿಕೆಗಳ ಮೇಯರುಗಳು ಹಾಗೂ ಆಯುಕ್ತರುಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪದನಿಮಿತ್ತ ಸದಸ್ಯರನ್ನಾಗಿಸಲಾಗಿದೆ. ಇನ್ನು ಬಿಡಿಎ ಆಯುಕ್ತರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ಬೆಂಗಳೂರು ಮೆಟ್ರೋ ರೈಲು ನಿಗಮ ಎಂಡಿ, ಬಿಎಂಆರ್ ಸಿಎಲ್ ಮಹಾನಗರ ಆಯುಕ್ತರು, ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರದ ಸಿಇಒರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯ ಆಯುಕ್ತರು, ಜಲಮಂಡಳಿ ಅಧ್ಯಕ್ಷರು, ಬಿಎಂಟಿಸಿ ಎಂಡಿ, ಬೆಸ್ಕಾಂ ಎಂಡಿ, ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆ ನಿರ್ದೇಶಕರು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ನಗರ ಯೋಜಕರು ಮತ್ತು ಪ್ರಾಧಿಕಾರದ ಮುಖ್ಯ ಅಭಿಯಂತರರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.

ಗ್ರೇಟರ್ ಬೆಂಗಳೂರು ಕಾಯ್ದೆ ಅಡಿ ಬೆಂಗಳೂರಲ್ಲಿ ಐದು ನಗರ ಪಾಲಿಕೆಗಳನ್ನು ರಚಿಸಿ, ನಗರಾಭಿವೃದ್ಧಿ ಇಲಾಖೆಯು ಕಳೆದ ತಿಂಗಳು ಕರಡು ಅಧಿಸೂಚನೆ ಹೊರಡಿಸಿತ್ತು. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳ ಅನ್ವಯ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ 5 ನಗರ ಪಾಲಿಕೆಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿದೆ. ಕರಡು ಅಧಿಸೂಚನೆಯಲ್ಲಿ ಐದು ನಗರ ಪಾಲಿಕೆಗಳಿಗೆ ಗಡಿಗಳನ್ನು ನಿರ್ದಿಷ್ಟಪಡಿಸಲಾಗಿತ್ತು.

ಸದಸ್ಯರ ಪಟ್ಟಿಯಲ್ಲಿ ಯಾರೆಲ್ಲಾ?

ಯತೀಂದ್ರ ಸಿದ್ದರಾಮಯ್ಯ
ನಿರ್ಮಲಾ ಸೀತರಾಮನ್
ಶೋಭಾ ಕರಂದ್ಲಾಜೆ
ರಾಮಲಿಂಗಾ ರೆಡ್ಡಿ
ಕೆಜೆ ಜಾರ್ಜ್
ಬೈರತಿ ಸುರೇಶ್
ದಿನೇಶ್ ಗುಂಡೂರಾವ್
ಕೃಷ್ಣ ಬೈರೇಗೌಡ
ಜಮೀರ್ ಅಹ್ಮದ್ ಖಾನ್
ಸಿಎನ್ ಮಂಜುನಾಥ್
ಪಿಸಿ ಮೋಹನ್
ತೇಜಸ್ವಿ ಸೂರ್ಯ
ನಾರಾಯಣ ಕೊರಗಪ್ಪ
ಜೈರಾಮ್ ರಮೇಶ್
ಜಗ್ಗೇಶ್
ಲಹರ್ ಸಿಂಗ್
ಜಿಸಿ ಚಂದ್ರಶೇಖರ್
ಬೈರತಿ ಬಸವರಾಜ
ಎಸ್ ಟಿ ಸೋಮಶೇಖರ್
ಮುನಿರತ್ನ
ಎಸ್ ಮುನಿರಾಜು
ಕೆ ಗೋಪಾಲಯ್ಯ
ಡಾ ಸಿಎನ್ ಅಶ್ವತ್ಥ ನಾರಾಯಣ
ಎಸಿ ಶ್ರೀನಿವಾಸ್
ಎಸ್ ರಘು
ರಿಜ್ವಾನ್ ಅರ್ಷದ್
ಎನ್ ಎ ಹ್ಯಾರಿಸ್
ಎಸ್ ಸುರೇಶ್ ಕುಮಾರ್
ಪ್ರಿಯಕೃಷ್ಣ
ಎಂ ಕೃಷ್ಣಪ್ಪ
ಉದಯ ಗರುಡಾಚಾರ್
ರವಿ ಸುಬ್ರಹ್ಮಣ್ಯ
ಆರ್ ಅಶೋಕ್
ಸಿಕೆ ರಘುಮೂರ್ತಿ
ಮಂಜುಳ ಲಿಂಬಾವಳಿ
ಸತೀಶ್ ರೆಡ್ಡಿ
ಎಂ ಕೃಷ್ಣಪ್ಪ
ಎಸ್ ಪುಟ್ಟಣ್ಣ
ಕೆ ಗೋವಿಂದ ರಾಜ್
ಎಚ್‌ಎಸ್ ಗೋಪಿನಾಥ್
ಬಿಕೆ ಹರಿಪ್ರಸಾದ್
ಟಿ ಎನ್ ಜಯರಾಯಿಗೌಡ
ಕೇಶವ ಪ್ರಸಾದ್
ಎನ್ ನಾಗರಾಜು
ನಸೀರ್ ಅಹ್ಮದ್
ಶರವಣ ಟಿಎ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿ ಕೆ ಶಿವಕುಮಾರ್

ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ...

Download Eedina App Android / iOS

X