ಗದಗ | ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್

Date:

Advertisements

 “ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಿಂದ ಸಾಕಷ್ಟು ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಪ್ರದೇಶಗಳ ಸಾರ್ವಜನಿಕರ ಸುರಕ್ಷತೆಗೆ ಪ್ರಥಮಾದ್ಯತೆ ನೀಡಿ, ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮುಂಗಾರು ಹಂಗಾಮು ಪರಿಸ್ಥಿತಿ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

“ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅತೀವೃಷ್ಟಿಯಿಂದ ಉಂಟಾಗುವ ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಧಿಕ ಪ್ರಮಾಣದ ಮಳೆ ಸುರಿದಲ್ಲಿ ತಕ್ಷಣ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು. ಪ್ರವಾಹ ಸಂಭವಿಸುವ 43 ಗ್ರಾಮಗಳನ್ನು ಗುರುತಿಸಲಾಗಿದ್ದು ಮುಂಜಾಗ್ರತೆಯಾಗಿ ಆ ಭಾಗದ ಅಧಿಕಾರಿಗಳು ಜೀವ ಹಾನಿ ತಡೆಗೆ ನಿರಂತರ ನಿಗಾ ವಹಿಸಬೇಕು” ಎಂದು ಸೂಚಿಸಿದರು.

Advertisements

ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಅವರು ಮಾತನಾಡಿ, “ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ತಾಲೂಕು ಮಟ್ಟದಲ್ಲಿಯೂ ಟಾಸ್ಕ್ ಫೋರ್ಸ ಸಮಿತಿ ಸಭೆ ನಿಯಮಿತವಾಗಿ ಜರುಗಿಸಿ ವರದಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು” ಎಂದರು.

ಉಪವಿಭಾಗಾಧಿಕಾರಿ ಗಂಗಪ್ಪ ಎಂ ಮಾತನಾಡಿ, “ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರಸ್ತುತ ಸುರಿದ ಮಳೆಯಿಂದ ಯಾವುದೇ ಮಾನವ ಜೀವ ಹಾನಿ ಹಾಗೂ ಜಾನುವಾರು ಹಾನಿಯಾಗಿರುವುದಿಲ್ಲ ಎಂದು ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ.ಎಚ್. ಮಾತನಾಡಿ “ಜಿಲ್ಲೆಯಲ್ಲಿ 1-1-2025 ರಿಂದ 25-8-2025 ರವರೆಗೆ 326 ಮಿ.ಮೀ ವಾಡಿಕೆ ಮಳೆ ಇದ್ದು 477 ಮಿ.ಮೀ ಮಳೆ ಆಗಿರುತ್ತದೆ. ಜಿಲ್ಲೆಯಲ್ಲಿ 46ರಷ್ಟು ಹೆಚ್ಚುವರಿ ಮಳೆಯಾಗಿದೆ” ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿಯಿಂದ ಮನೆ, ಶಾಲೆ, ಬೆಳೆ ಹಾಗೂ ಮೂಲಭೂತ ಸೌಕರ್ಯಗಳ ಹಾನಿಗಳ ಕುರಿತು ಚರ್ಚಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರು, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ನೀಲಗುಂದ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಚಿವದ್ವಯರ ಭೇಟಿ; ಪರಿಶೀಲನೆ

ಕಮಲನಗರ ಹಾಗೂ ಔರಾದ್‌ ತಾಲೂಕಿನಲ್ಲಿ ಅಧಿಕ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಉಸ್ತುವಾರಿ...

ಹಾವೇರಿ | ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

"ಪರಿಶಿಷ್ಟ ವರ್ಗದ ಜನಾಂಗದ ಏಳಿಗಾಗಿ ಶ್ರಮಿಸಿದ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ...

ಉಡುಪಿ | ಶಾಸಕ ಯಶ್ಪಾಲ್ ಸುವರ್ಣರವರ ಮೇಲೆ ಕಠಿಣ ಸಾಂವಿಧಾನಿಕ ಕ್ರಮ ಜರುಗಿಸಿ – ಕೆ ಫಣಿರಾಜ್

ತಮ್ಮ ಶಾಸಕ ಸ್ಥಾನದ ಸಂವಿಧಾನಿಕ ಮರ್ಯಾದೆಯನ್ನು ಮೀರಿ ವರ್ತಿಸಿರುವ ಉಡುಪಿಯ ಶಾಸಕ...

ಮಂಗಳೂರು | ಬಾಲಕರ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಮೊಹಮ್ಮದ್ ಮಿಕ್ದಾದ್‌ಗೆ ಪ್ರಥಮ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ. ಶಾಲಾ ಶಿಕ್ಷಣ ಇಲಾಖೆಯು 2025-2026ನೇ...

Download Eedina App Android / iOS

X