ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಭಾರೀ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ರಿಯಾಸಿ ಎಸ್‌ಎಸ್‌ಪಿ ಪರಮವೀರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.ಇದಕ್ಕೂ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಕತ್ರಾ ಜಿಲ್ಲೆಯ ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತದಲ್ಲಿ ‘ಅತ್ಯಂತ ದುರಂತ’ ಎಂದು ಕರೆದಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಂಪೂರ್ಣ ಬೆಂಬಲ ಪಡೆಯುವ ಭರವಸೆಯಿದೆ ಎಂದು ಹೇಳಿದರು.
