ಭಾರೀ ಮಳೆ | ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ: 30 ಮಂದಿ ಸಾವು

Date:

Advertisements

ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲದ ಬಳಿ ಭಾರೀ ಮಳೆಯಿಂದ ಭಾರಿ ಭೂಕುಸಿತ ಸಂಭವಿಸಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ರಿಯಾಸಿ ಎಸ್‌ಎಸ್‌ಪಿ ಪರಮವೀರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಇದಕ್ಕೂ ಮೊದಲು, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಕತ್ರಾ ಜಿಲ್ಲೆಯ ವೈಷ್ಣೋದೇವಿ ದೇಗುಲದ ಬಳಿ ಸಂಭವಿಸಿದ ಭೂಕುಸಿತದಲ್ಲಿ ‘ಅತ್ಯಂತ ದುರಂತ’ ಎಂದು ಕರೆದಿದ್ದಾರೆ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ. ಕೇಂದ್ರದಿಂದ ಸಂಪೂರ್ಣ ಬೆಂಬಲ ಪಡೆಯುವ ಭರವಸೆಯಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಧಾರವಾಡ | ಭಾರೀ ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಣೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅಮಿತ್ ಶಾ, ಘಟನೆಯ ನಂತರ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡಗಳನ್ನು ಈಗಾಗಲೇ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ. “ಜಮ್ಮು ಮತ್ತು ಕಾಶ್ಮೀರದಲ್ಲಿ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತ ಘಟನೆ ಅತ್ಯಂತ ದುಃಖಕರ. ಈ ನಿಟ್ಟಿನಲ್ಲಿ, ನಾನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಮತ್ತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡಿದ್ದೇನೆ” ಎಂದು ತಿಳಿಸಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕುಟುಂಬಗಳಿಗೆ ಸಂತಾಪ ಸೂಚಿಸಿದರು. ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಸಹಾಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಲ್‌ಜಿ, “ಶ್ರೀ ಮಾತಾ ವೈಷ್ಣೋದೇವಿ ದೇಗುಲದಲ್ಲಿ ನಿರಂತರ ಮಳೆಯಿಂದ ಉಂಟಾದ ದುರದೃಷ್ಟಕರ ಭೂಕುಸಿತವು ಭಕ್ತರ ಪ್ರಾಣವನ್ನು ಬಲಿ ತೆಗೆದುಕೊಂಡಿದೆ ಎಂದು ತಿಳಿದು ತೀವ್ರ ದುಃಖವಾಯಿತು. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ತಕ್ಷಣದ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

Download Eedina App Android / iOS

X