ರಾಯಚೂರು | ಐಸಿಡಿಎಸ್ ಕೈಬಿಡಲು ಆಗ್ರಹಿಸಿ ಸಹಿ ಸಂಗ್ರಹ ಚಳುವಳಿ

Date:

Advertisements

ಕೇಂದ್ರ ಸರ್ಕಾರದ ಐಸಿಡಿಎಸ್ ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಅಕರ್ಷಿಸಲು ಮುಖಚಹರೆ ಗುರುತಿಸುವ ಕ್ರಮವನ್ನು ಅಳವಡಿಸಿದ್ದು, ಇದರಿಂದ ತೊಂದರೆಗಳಾಗುತ್ತಿರುವುದರಿಂದ ಕೂಡಲೇ ಇದನ್ನು ಕೈಬಿಡಲು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಗರದ ಕೇಂದ್ರ ಪೋಸ್ಟ್ ಆಫೀಸ್ ಕಚೇರಿ ಮುಂದೆ ಸಹಿ ಸಂಗ್ರಹಿಸಿ ಚಳುವಳಿ ನಡೆಸಿ, ರಿಜಿಸ್ಟರ್ ಪೋಸ್ಟ್ ಮೂಲಕ ಕೇಂದ್ರ ರಾಜ್ಯ ಸರ್ಕಾರಕ್ಕೆ ಒತ್ತಾಯದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಪೋಸ್ಟ್ ಮಾಡಿ ಆಗ್ರಹಿಸಿದರು.

ಕೇಂದ್ರ ಸರ್ಕಾರದ ಐಸಿಡಿಎಸ್ ಯೋಜನೆಗೆ 50 ವರ್ಷಗಳು ಪೂರೈಸುತ್ತಿದ್ದು, ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರಗಳು ಕ್ರಮಗಳನ್ನು ರೂಪಿಸಬೇಕಿತ್ತು. ಆದರೆ ಅದರ ಬದಲಾಗಿ ಸಂಕೀರ್ಣಗೊಳಿಸಲಾಗುತ್ತಿದೆ ಎಂದು ದೂರಿದರು.

ಯಾವುದೇ ಸೌಲಭ್ಯಗಳನ್ನು ಕೊಡದೇ ಮುಖಚಹರೆ ಗುರುತಿಸುವ ಕ್ರಮವನ್ನು ಅಳವಡಿಸಿದ್ದರಿಂದ ಕ್ಷೇತ್ರಮಟ್ಟದಲ್ಲಿ ಹಲವಾರು ತೊಂದರೆಗಳನ್ನು ಅನುಭವಿಸುವಂತಾಗಿದೆ. ಆಹಾರ ಭದ್ರತಾ ಕಾಯ್ದೆಯಡಿ ಯಾವುದೇ ಫಲಾನುಭವಿ ಹಸಿವಿನಿಂದ ನರಳಬಾರದು, ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಆಧಾರ ಕಾರ್ಡ್ ಇಲ್ಲ ಎಂಬ ನೆಪದಲ್ಲಿ ಸಬ್ಸಿಡಿ ಹಾಗೂ ಉಚಿತವಾಗಿ ಸಿಗುವ ಸೌಲಭ್ಯಗಳಿಂದ ಫಲಾನುಭವಿಗಳಿಗೆ ವಂಚನೆಯಾಗಬಾರದು. ಸಂರಕ್ಷಣೆ ಮಾಡಬೇಕಾದ ಸರ್ಕಾರಗಳು ಇಂದು ಮುಖಚರ್ಯವನ್ನು ಕಡ್ಡಾಯಗೊಳಿಸುವ ಮುಖಾಂತರ ಫಲಾನುಭವಿಗಳ ಹಕ್ಕನ್ನು ನಿರಾಕರಿಸುತ್ತಿವೆ ಎಂದು ಆಪಾದಿಸಿದರು.

ಮುಖಚಹರೆಯಿಂದ ಫಲಾನುಭವಿಗಳ ವೈಯಕ್ತಿಕ ಮಾಹಿತಿ ಸೋರಿಕೆಯಾಗುತ್ತದೆ, ಸೈಬರ್ ವಂಚನೆಗಳಿಗೆ ಅನುಕೂಲ ದಾರಿಯಾಗುತ್ತದೆ. ಶೇ60 ರಷ್ಟು ತನ್ನ ಪಾಲಿನ ವಂತಿಗೆಯನ್ನು ನೀಡಬೇಕಾದ ಕೇಂದ್ರ ಸರ್ಕಾರ ಇಂತಹ  ನಿರ್ಬಂಧಗಳನ್ನು ಹಾಕಿ  ತನ್ನ ಪಾಲಿನ ಹಣ ಕಡಿಮೆ ಮಾಡಲು ಮುಂದಾಗಿದನ್ನು ಖಂಡಿಸಿದರು.

ಚಟುವಟಿಕೆ ಆಧಾರದಲ್ಲಿ ಹಣ ಬಿಡುಗಡೆ ಮಾಡುವ ವಿಧಾನಗಳು ಮತ್ತು ಭಾರತದಲ್ಲಿ ಐಸಿಡಿಎಸ್ ಫಲಾನುಭವಿಗಳನ್ನು ಕಡಿಮೆ ತೋರಿಸಿ ಹಣ ಕಡಿತ ಮಾಡುವ ಯೋಜನೆ ಇದಾಗಿದೆ. ಕೂಡಲೇ ಇದನ್ನು ರದ್ದು ಮಾಡಿ ಐಸಿಡಿಎಸ್ ಯೋಜನೆಯನ್ನು ಖಾಯಂ ಮಾಡಬೇಕು, ಗುಜರಾತ್ ಹೈಕೋರ್ಟ್ ತೀರ್ಪಿನಂತೆ ‘ಸಿ’ ಮತ್ತು ‘ಡಿ’ ಗುಂಪಿನ ನೌಕರರೆಂದು ಪರಿಗಣಿಸಬೇಕು. 2018 ರಿಂದ ಅನ್ವಯವಾಗುವಂತೆ ವೇತನ ಹೆಚ್ಚಿಸಿ, ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬಾಣಂತಿ, ಮಗು ಸಾವು

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಹೆಚ್.ಪದ್ಮಾ, ಕಾರ್ಯದರ್ಶಿ ನರ್ಮದಾ, ಖಜಾಂಚಿ ಗಂಗಮ್ಮ, ಶಾಂತ, ರಾಘಮ್ಮ, ಶರಣಮ್ಮ, ಸುನಿತಾ, ಶಾರದಾ, ಶಾಂತಮ್ಮ, ಮಲ್ಲಮ್ಮ, ಗೋಕುರಮ್ಮ, ಚಂದ್ರಮ್ಮ, ಇಂದ್ರಮ್ಮ, ಅಸ್ಮೀ, ರೇಹಮತ್, ಗೌರಮ್ಮ. ವೆಂಕಟಮ್ಮ, ಸಾವಿತ್ರಿ, ಮಮತಾ, ಕೆ.ವಿಜಯ, ನಾಗರತ್ನ, ಡಿಎಸ್ ಶರಣ ಬಸವ, ಕೆಜಿ ವೀರೇಶ ಸೇರಿದಂತೆ ಅನೇಕರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X